ETV Bharat / state

ಅರಣ್ಯ ಇಲಾಖೆ ಕಾಮಗಾರಿಗಳಲ್ಲಿ ನಕಲಿ ಬಿಲ್ ಸೃಷ್ಟಿಸಿ ಹಣ ಪಡೆಯಲಾಗಿದೆ: ಶಾಸಕ ಎ.ಟಿ. ರಾಮಸ್ವಾಮಿ

ಅರಣ್ಯ ಇಲಾಖೆ ಕಾಮಗಾರಿಗಳಲ್ಲಿ ನಕಲಿ ಬಿಲ್​ಗಳನ್ನು ಸೃಷ್ಟಿಸಿ ಹಣ ಪಡೆಯಲಾಗಿದೆ. ಈ ಕುರಿತು ತನಿಖೆ ನಡೆಸಿ ಸಂಬಂಧಿಸಿದ ಅರಣ್ಯಾಧಿಕಾರಿ ವಿರುದ್ಧ ಕ್ರಮ ಜರುಗಿಸುವಂತೆ ಅರಕಲಗೂಡು ಶಾಸಕ ರಾಮಸ್ವಾಮಿ ಆಗ್ರಹಿಸಿದರು.

ಶಾಸಕ ಎ.ಟಿ.ರಾಮಸ್ವಾಮಿ ಆರೋಪ
ಶಾಸಕ ಎ.ಟಿ.ರಾಮಸ್ವಾಮಿ ಆರೋಪ
author img

By

Published : Aug 25, 2020, 12:55 PM IST

ಅರಕಲಗೂಡು: ಕೋವಿಡ್-19 ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರದ ನಿಯಮ ಉಲ್ಲಂಘಿಸಿ ಹೆಚ್ಚಿನ ಜನರು ಪಾಲ್ಗೊಳ್ಳಲು ಅವಕಾಶ ನೀಡಿದ ಮೂರು ಕಲ್ಯಾಣ ಮಂಟಪಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ನಿಯಮ ಪಾಲನೆ ಕಟ್ಟು ನಿಟ್ಟಾಗಿ ಪಾಲನೆಯಾಗದಿದ್ದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಶಾಸಕ ಎ.ಟಿ. ರಾಮಸ್ವಾಮಿ ತಿಳಿಸಿದರು.

ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಅತಿವೃಷ್ಟಿಯ ಪರಿಣಾಮ ರೂ 39.17 ಕೋಟಿ ಆಸ್ತಿ-ಪಾಸ್ತಿ, ಬೆಳೆನಷ್ಟ ಸಂಭವಿಸಿದ್ದು, ಸರ್ಕಾರಕ್ಕೆ ವರದಿ ನೀಡಲಾಗಿದೆ. ಮಳೆಯಿಂದ 19 ಮನೆಗಳು ಸಂಪೂರ್ಣವಾಗಿ ಹಾಗೂ 42 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 80 ಹೆಕ್ಟೇರ್ ವಿವಿಧ ತೋಟಗಾರಿಕೆ ಬೆಳೆಗಳು ಹಾಗೂ 1,150 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ಜಿಲ್ಲಾ ಪಂಚಾಯತ್​ಗೆ ರೂ. 2.23 ಕೋಟಿ ಮತ್ತು ಲೋಕೋಪಯೋಗಿ ಇಲಾಖೆಗೆ ರೂ. 33 ಕೋಟಿ ವಿವಿಧ ಆಸ್ತಿಗಳಿಗೆ ಹಾನಿ ಸಂಭವಿಸಿದೆ ಎಂದರು.

ಶಾಸಕ ಎ.ಟಿ. ರಾಮಸ್ವಾಮಿ ಆರೋಪ

ಪಟ್ಟಣ ಆಸ್ಪತ್ರೆಗೆ 50 ಆಕ್ಸಿಜನ್ ಸಂಪರ್ಕ ಕಲ್ಪಿಸಲು ಮಂಜೂರಾತಿ ದೊರೆತಿದೆ. ತಾವು ಆರೋಗ್ಯ ಇಲಾಖೆ ನಿರ್ದೇಶಕರನ್ನು ಭೇಟಿ ಮಾಡಿ ಇದನ್ನು 75ಕ್ಕೆ ವಿಸ್ತರಿಸಲು ಮನವಿ ಮಾಡಿದ್ದು ಮಂಜೂರಾತಿ ದೊರೆತಿದೆ ಎಂದರು.

ಅರಣ್ಯ ಇಲಾಖೆ ಕಾಮಗಾರಿಗಳಲ್ಲಿ ನಕಲಿ ಬಿಲ್​ಗಳನ್ನು ಸೃಷ್ಟಿಸಿ ಹಣ ಪಡೆಯಲಾಗಿದ್ದು, ಈ ಕುರಿತು ತನಿಖೆ ನಡೆಸಿ ಸಂಬಂಧಿಸಿದ ಅರಣ್ಯಾಧಿಕಾರಿ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಂದ ಮಾಡಿಸಲಾಗಿದೆ. ಆದರೆ, ಬೆಂಗಳೂರಿನ ಅತ್ತಿಬೆಲೆ ಪ್ರದೇಶದ ಗುತ್ತಿಗೆದಾರರ ಹೆಸರಿನಲ್ಲಿ ಬಿಲ್ ಮಾಡಿ ಹಣ ಪಡೆಯಲಾಗಿದೆ. ವಲಯ ಅರಣ್ಯಾಧಿಕಾರಿ ಮೇ 8 ರಂದು ಕರ್ತವ್ಯಕ್ಕೆ ಹಾಜರಾಗಿದ್ದರೂ ಮೇ 1 ರಂದು ನಡೆಸಲಾದ ಕಾಮಗಾರಿಗಳ ಬಿಲ್​ಗಳಿಗೂ ದೃಢೀಕರಣ ನೀಡಿದ್ದಾರೆ. ಇದಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ ಎಂದು ಶಾಸಕರು ಆರೋಪಿಸಿದರು.

ಪ್ರಕರಣದ ಕುರಿತು ಉನ್ನತ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಪರ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದಲ್ಲದೆ, ದೂರವಾಣಿ ಮೂಲಕ ಕ್ರಮಕ್ಕೆ ಆಗ್ರಹಿಸಿರುವುದಾಗಿ ಹೇಳಿದರು. ತುರ್ತು ಕ್ರಮ ಜರುಗಿಸಿ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ದಾಖಲೆಗಳನ್ನು ಸರಿಪಡಿಸುವ ಕಾರ್ಯ ನಡೆಯಲಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.