ETV Bharat / state

ರಾಮನಗರ ಜಿಲ್ಲೆಯನ್ನು ಯಾರಿಗೂ ಜಿಪಿಎ ಬರೆದುಕೊಟ್ಟಿಲ್ಲ: ಶಾಸಕ ಪ್ರೀತಂಗೌಡ - ರಾಮನಗರ ಪ್ರಕರಣವನ್ನು ಖಂಡಿಸಿ ಶಾಸಕ ಪ್ರೀತಂಗೌಡ ಹಾಸನದಲ್ಲಿ ಪ್ರತಿಭಟನೆ

ಸಂಸದ ಡಿ.ಕೆ.ಸುರೇಶ್ ನಡವಳಿಕೆಯನ್ನು ಇಡೀ ರಾಜ್ಯದ ಜನತೆ ಖಂಡಿಸುತ್ತಿದ್ದಾರೆ. ರಾಮನಗರ ಜಿಲ್ಲೆಯನ್ನು ಯಾರಿಗೂ ಜಿಪಿಎ ಬರೆದುಕೊಟ್ಟಿಲ್ಲ. ಅಲ್ಲಿ ಪಾಳೇಗಾರರ ಸಂಸ್ಕೃತಿ ನಡೆಯುತ್ತಿಲ್ಲ. ಇನ್ಮುಂದೆ ಅವರ ನಡವಳಿಕೆ ತಿದ್ದಿಕೊಳ್ಳಬೇಕು ಎಂದು ಶಾಸಕ ಪ್ರೀತಂಗೌಡ ಹೇಳಿದರು.

mla preetham gowda
ರಾಮನಗರ ಪ್ರಕರಣವನ್ನು ಖಂಡಿಸಿ ಶಾಸಕ ಪ್ರೀತಂಗೌಡ ಹಾಸನದಲ್ಲಿ ಪ್ರತಿಭಟನೆ
author img

By

Published : Jan 5, 2022, 9:05 AM IST

ಹಾಸನ: ನಮಗೂ 14 ತಿಂಗಳು ಸರ್ಕಾರವಿರಲಿಲ್ಲ. ಕಾರ್ಯಕ್ರಮಕ್ಕೆ ಬರಬೇಕೆಂದು ಯಾರು ವಿಳ್ಯದೆಲೆ ಕೊಟ್ಟು ಕರೆಯುತ್ತಿರಲಿಲ್ಲ. ಆದರೆ ರಾಮನಗರದಲ್ಲಿ ಸಂಸದ ಡಿ.ಕೆ.ಸುರೇಶ್ ನಡವಳಿಕೆ ಏನೆಂಬುದನ್ನು ಇಡೀ ರಾಜ್ಯದ ಜನತೆ ನೋಡಿದ್ದಾರೆ. ರಾಮನಗರ ಜಿಲ್ಲೆಯನ್ನು ಯಾರಿಗೂ ಜಿಪಿಎ(ಜನರಲ್ ಪವರ್ ಆಫ್ ಅಟಾರ್ನಿ) ಬರೆದುಕೊಟ್ಟಿಲ್ಲ. ಅಲ್ಲಿ ಪಾಳೇಗಾರರ ಸಂಸ್ಕೃತಿ ನಡೆಯಲ್ಲ. ಇನ್ಮುಂದೆ ಅವರ ನಡವಳಿಕೆ ತಿದ್ದಿಕೊಳ್ಳಬೇಕು ಎಂದು ಶಾಸಕ ಪ್ರೀತಂಗೌಡ ಹೇಳಿದರು.

ರಾಮನಗರ ಪ್ರಕರಣವನ್ನು ಖಂಡಿಸಿ ಶಾಸಕ ಪ್ರೀತಂಗೌಡ ಹಾಸನದಲ್ಲಿ ಪ್ರತಿಭಟನೆ

ರಾಮನಗರ ಪ್ರಕರಣ ಖಂಡಿಸಿ ನಿನ್ನೆ (ಮಂಗಳವಾರ) ಹಾಸನದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಕ್ಯಾಬಿನೆಟ್ ಮಂತ್ರಿ ಭಾಷಣ ಮಾಡುವಾಗ ಪಾಳೇಗಾರರ ಸಂಸ್ಕೃತಿಯಲ್ಲಿ ಜಗಳಕ್ಕೆ ಹೋಗಿದ್ದಾರೆ. ಇಡೀ ರಾಜಕಾರಣಿಗಳು ತಲೆ ತಗ್ಗಿಸುವ ಕೆಲಸವನ್ನು ಸಂಸದ ಡಿ.ಕೆ.ಸುರೇಶ್ ಮಾಡಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯಾದ್ಯಂತ ಅಶ್ವತ್ಥ್​​ ನಾರಾಯಣ ಅವರನ್ನು ಬೆಂಬಲಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಮಾಫಿಯಾ ಆಫ್ ರಾಮನಗರ ಖಂಡಿಸುತ್ತೇವೆ. ಅವರು ಮಾಡುತ್ತಿರುವುದು ಅವರ ಮೇಲೆ ಚಪ್ಪಡಿ ಕಲ್ಲು ಎಳೆದುಕೊಂಡಂತೆ. ಕಾರ್ಯಕ್ರಮಕ್ಕೆ ಡಿ.ಕೆ ಸುರೇಶ್ ಅವರಿಗೆ ಡೋಲ್ ಸೆಟ್ಟು ಇಟ್ಟು ಆಹ್ವಾನ ಕೊಡಲು ಆಗಲ್ಲ. ಡಿಸಿಯಿಂದ ಸಮಸ್ಯೆ ಆಗಿದ್ದರೆ ಹಕ್ಕುಚ್ಯುತಿ ಮಂಡಿಸಲಿ.

ಸಾವಿರ ಜನ ಕರೆದುಕೊಂಡು ಬಂದು ಧಿಕ್ಕಾರ ಕೂಗುವುದು ಸಭ್ಯತೆಯಲ್ಲ. ಒಂದೂವರೆ ವರ್ಷ ಸಮ್ಮಿಶ್ರ ಸರ್ಕಾರ ಇತ್ತು. ನನ್ನನ್ನು ಕರೆಯುತ್ತಿರಲಿಲ್ಲ. ನಾನು ಸ್ಟೇಜ್ ಮೇಲೆ ಹೋಗಿ ಕೂಗಾಡಿದ್ನ?. ನನಗೇನು ಕೂಗಾಡಲು ಬರಲ್ವಾ?. ನನ್ನ ಹತ್ರ ಹಾಸನದಲ್ಲಿ ಜನ ಇಲ್ವಾ?. ನಾನು ಆ ರೀತಿ ಮಾಡಿದ್ನಾ?. ಸಮಾಧಾನವಾಗಿಯೇ ಇದ್ದೆ. ರಾಜಕೀಯ ಬಂದಾಗ ರಾಜಕೀಯ ಮಾಡೋಣ ಎಂದರು.

ಡಿಕೆಶಿಗೆ ಟಾಂಗ್​:

ಮುಂದಿನ ಚುನಾವಣೆಯಲ್ಲಿ ಹಾಸನದಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಕಳೆದ ಬಾರಿ ಯಾರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದರೋ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೋ ಅವರು ಏಳಕ್ಕೆ ಏಳು ಕಾಂಗ್ರೆಸ್ ಗೆಲ್ಲುತ್ತದೆ ಎಂದಿದ್ದರು. ಏಳು ಮಕಾಡೆ ಮಲಗಿ, ಹೇಳಿದವರು ಸೋತರು ಎಂದು ಟಾಂಗ್ ನೀಡಿದರು.

ಇದನ್ನೂ ಓದಿ: ‘ಮಹಿಳಾ ಸ್ವಾಸ್ಥ್ಯಕ್ಕೆ ಮೊಬೈಲ್ ಕ್ಲಿನಿಕ್’: ಸಂಚಾರಿ ವಾಹನಕ್ಕೆ ಇಂದು ಚಾಲನೆ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.