ETV Bharat / state

ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ, ಇದು ಸೂರ್ಯ-ಚಂದ್ರರಿರುವಷ್ಟೇ ಸತ್ಯ : ಪ್ರೀತಂ ಗೌಡ - MLA Preham J. Gowda Speak in Hassan

ವಿಜಯೇಂದ್ರ ಸೂಪರ್ ಸಿಎಂ ಎಂಬ ವಿಚಾರವಾಗಿ ಮಾತನಾಡಿದ ಅವರು, ಇದು ಅವರು ಬೆಳೆಯುತ್ತಿರುವುದನ್ನು ನೋಡಿ ಹೀಗೆ ಮಾತನಾಡುತ್ತಿದ್ದಾರೆ. ಅವರ ಪ್ರಭಾವ ಹೆಚ್ಚಾಗಿದೆ. ರಾಜ್ಯದ ನಾಯಕತ್ವ ವಹಿಸಿಕೊಳ್ಳಲು ಮುಂದಾಳತ್ವದಲ್ಲಿ ಬರುತ್ತಿದ್ದಾರೆ. ಅವರು ಬೆಳೆಯುತ್ತಿದ್ದಾರೆ ಎಂದು ಹೀಗೆ ಮಾತನಾಡುತ್ತಿದ್ದಾರೆ..

MLA Preham J. Gowda Spoke in Hassan
ಶಾಸಕ ಪ್ರೀತಂ ಜೆ. ಗೌಡ
author img

By

Published : Sep 18, 2020, 3:40 PM IST

ಹಾಸನ : ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುವುದು ಸೂರ್ಯ-ಚಂದ್ರರಿರುವಷ್ಟೇ ಸತ್ಯ. ಮುಂದಿನ ಚುನಾವಣೆ ಕೂಡ ಸಿಎಂ ಬಿಎಸ್‌ವೈ ಅವರ ನೇತೃತ್ವದಲ್ಲಿ ನಡೆಯುತ್ತೆ. ನಾನು ಹೇಳುವ ಭವಿಷ್ಯ ನಿಜವಾಗುತ್ತೆ ಎಂದು ಶಾಸಕ ಪ್ರೀತಂ ಜೆ ಗೌಡ ತಿಳಿಸಿದರು.

ಸಿಎಂ ಬದಲಾವಣೆ ಕುರಿತಂತೆ ಶಾಸಕ ಪ್ರೀತಂ ಜೆ ಗೌಡ ಸ್ಪಷ್ಟನೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮದ ಸ್ನೇಹಿತರು ಇದನ್ನು ಆರೋಗ್ಯಕರ ಚರ್ಚೆ ಮಾಡುತ್ತಿದ್ದಾರೆ ಅಷ್ಟೇ.. ಈ ರೀತಿಯ ಚರ್ಚೆಯಿಂದ ಯಾರಿಗೆ ಖುಷಿಯಾಗುತ್ತೋ, ಅದನ್ನು ಅವರೇ ಹುಟ್ಟು ಹಾಕಿದ್ದಾರೆ. ಆದರೆ, ಆ ಚರ್ಚೆಗೆ ಪ್ರೋತ್ಸಾಹ ಕೊಡಲು ಒಬ್ಬರೂ ಶಾಸಕರಿರುವುದಿಲ್ಲ. ಎಲ್ಲಾ ಶಾಸಕರು ಸಿಎಂ ಅವರ ಹಿಂದೆ ಇದ್ದೇವೆ ಎಂದರು.

ಸಿಎಂ‌ ದೆಹಲಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಹಣ ತರುವ ಯೋಜನೆಯೊಂದಿಗೆ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳು ಹಾಗೂ ರಾಜ್ಯಾಧ್ಯಕ್ಷರಿಗೆ ಬಿಟ್ಟ ವಿಚಾರ ಎಂದರು. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಿಂದ ಪಕ್ಷದಲ್ಲಿ ಯಾವ ಅಸಮಾಧಾನವೂ ಉಂಟಾಗಲ್ಲ ಎಂದು ತಿಳಿಸಿದರು.

ವಿಜಯೇಂದ್ರ ಮುಂದೊಂದು ದಿನ‌ ಸಿಎಂ ಆಗ್ತಾರೆ : ವಿಜಯೇಂದ್ರ ಸೂಪರ್ ಸಿಎಂ ಎಂಬ ವಿಚಾರವಾಗಿ ಮಾತನಾಡಿದ ಅವರು, ಇದು ಅವರು ಬೆಳೆಯುತ್ತಿರುವುದನ್ನು ನೋಡಿ ಹೀಗೆ ಮಾತನಾಡುತ್ತಿದ್ದಾರೆ. ಅವರ ಪ್ರಭಾವ ಹೆಚ್ಚಾಗಿದೆ. ರಾಜ್ಯದ ನಾಯಕತ್ವ ವಹಿಸಿಕೊಳ್ಳಲು ಮುಂದಾಳತ್ವದಲ್ಲಿ ಬರುತ್ತಿದ್ದಾರೆ. ಅವರು ಬೆಳೆಯುತ್ತಿದ್ದಾರೆ ಎಂದು ಹೀಗೆ ಮಾತನಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ ಆಗುವ ಎಲ್ಲ ಅರ್ಹತೆ ಮತ್ತು ಯೋಗ್ಯತೆ ಅವರು ಇಟ್ಟುಕೊಂಡಿದ್ದಾರೆ. ಅವರು ಸೂಪರ್ ಸಿಎಂ ಅಲ್ಲ, ಮುಂದೊಂದು ದಿನ‌ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.