ETV Bharat / state

ಹೇಮಾವತಿ ಜಲಾಶಯ ಭರ್ತಿ.. ಸಂಸದ ಪ್ರಜ್ವಲ್​​ ರೇವಣ್ಣ ಬಾಗಿನ ಅರ್ಪಣೆ..

ಹೇಮಾವತಿ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಸಂಸದ ಪ್ರಜ್ವಲ್ ರೇವಣ್ಣ ಜಲಾಯಶಯಕ್ಕೆ ಬಾಗಿನ ಅರ್ಪಿಸಿದರು. ಮುಂಜಾಗೃತಾ ಕ್ರಮವಾಗಿ ನೀರನ್ನು ನದಿಗೆ ಹರಿಬಿಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಹೇಮಾವತಿ ಜಲಾಶಯ
author img

By

Published : Aug 11, 2019, 4:45 PM IST

ಹಾಸನ: ಜಿಲ್ಲೆಯ ಹೇಮಾವತಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್ ಕೆ ಕುಮಾರಸ್ವಾಮಿ ಇಂದು ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಮಾತನಾಡಿ, ನಮ್ಮ ನಿರೀಕ್ಷೆಗಿಂತಲೂ ಹೆಚ್ಚಿನ ಮಳೆಯಾಗಿದೆ. 1,01,967 ಕ್ಯೂಸೆಕ್ ನೀರಿನ ಒಳಹರಿವು ಇದೆ. ಹಾಗಾಗಿ ಜಲಾಶಯಕ್ಕೆ ಮತ್ತು ಜನರಿಗೆ ತೊಂದರೆಯಾಗದಂತೆ ಹೆಚ್ಚುವರಿ ನೀರನ್ನು ಹರಿಬಿಡಲು ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನ ಮಾಡಿದ್ದೇವೆ ಎಂದರು.

ಈಗಾಗಲೇ ಪ್ರವಾಹದಿಂದ ಹೊಳೆನರಸೀಪುರ ತಾಲೂಕಿನಲ್ಲಿ 25,000 ಎಕರೆ, ಬೇಲೂರು ತಾಲೂಕಿನಲ್ಲಿ 50 ಸಾವಿರ ಎಕರೆ ಭೂಮಿ ಹಾಳಾಗಿದೆ. ಜಿಲ್ಲೆಯಲ್ಲಿ 18 ನಾಲೆಗಳು ಒಡೆದಿವೆ. ಹಳೆಕೋಟೆ ಹೋಬಳಿಯಲ್ಲಿ 98 ಮನೆಗಳು, ಚನ್ನಪಟ್ಟಣದಲ್ಲಿ 28 ಮನೆಗಳು, ಹೊಳೆನರಸೀಪುರದಲ್ಲಿ 5 ಮತ್ತು ಗನ್ನಿಕಡದಲ್ಲಿ ಹಲವು ಮನೆಗಳು ಕುಸಿದಿವೆ. ಚನ್ನರಾಯಪಟ್ಟಣದ 78 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದರು.

ಹೇಮಾವತಿ ಜಲಾಶಯಕ್ಕೆ ಪ್ರಜ್ವಲ್ ರೇವಣ್ಣ ಬಾಗಿನ ಅರ್ಪಣೆ..

ಪ್ರತಿ ದಿನವೂ ಸಂತ್ರಸ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಹೀಗಾಗಿ ಹೊಳೆನರಸೀಪುರದಲ್ಲಿ 1, ಸಕಲೇಶಪುರದಲ್ಲಿ 6, ಬೇಲೂರಿನಲ್ಲಿ 4 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಜಾನುವಾರುಗಳಿಗಾಗಿ ಗೋ ಶಾಲೆಯನ್ನೂ ಆರಂಭಿಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದರು.

ಚೆಸ್ಕಾಂ ಅಧಿಕಾರಿಗಳಿಗೆ ಜಲಾವೃತ ಸ್ಥಳಗಳಲ್ಲಿ ವಿದ್ಯುತ್ ಕಡಿತ ಮಾಡಲು ಹೇಳಲಾಗಿದೆ. ಜಿಲ್ಲೆಯಲ್ಲಿ ಸಂತ್ರಸ್ತರ ತಾತ್ಕಾಲಿಕ ಪರಿಹಾರಕ್ಕಾಗಿ ಐದು ಕೋಟಿ ಅನುದಾನ ಬಂದಿದ್ದು, ಅದು ಸಾಕಾಗುತ್ತಿಲ್ಲ. ಇನ್ನೂ 10 ಕೋಟಿ ಹಣದ ಅಗತ್ಯವಿದೆ. ಅದನ್ನು ಸರ್ಕಾರ ಕೂಡಲೇ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲೆಯ ದಂಡಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಉಪ ವಿಭಾಗಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

Intro:ಹಾಸನ : ಜಿಲ್ಲೆಯ ಹೇಮಾವತಿ ಜಲಾಶಯವೂ ಸಂಪೂರ್ಣವಾಗಿ ಭರ್ತಿಯಾಗಿದ್ದು, ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್. ಕೆ. ಕುಮಾರಸ್ವಾಮಿ ಇಂದು ವಾಗಿನ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಮಾತನಾಡಿ ನಮ್ಮ ನಿರೀಕ್ಷೆಗಿಂತಲೂ ಹೆಚ್ಚಿನ ಮಳೆಯಾಗಿದ್ದು1,01,967 ಕ್ಯೂಸೆಕ್ ನೀರಿನ ಒಳ ಹರಿವು ಇದೆ. ಹಾಗಾಗಿ ಜಲಾಶಯಕ್ಕೆ ಮತ್ತು ಜನರಿಗೆ ತೊಂದರೆಯಾಗದಂತೆ ಹೆಚ್ಚುವರಿ ನೀರನ್ನು ಹರಿ ಬಿಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

Body:ಈಗಾಗಲೇ ಪ್ರವಾಹದಿಂದ ಹೊಳೆನರಸೀಪುರ ತಾಲೂಕಿನಲ್ಲಿ 25,000 ಎಕರೆ, ಬೇಲೂರು ತಾಲೂಕಿನಲ್ಲಿ 50 ಸಾವಿರ ಎಕರೆ ಭೂಮಿ ಹಾಳಾಗಿದೆ. ಜಿಲ್ಲೆಯಲ್ಲಿ 18 ಚಾನೆಲ್ ಗಳು ಹೊಡೆದಿವೆ. ಹಳೆಕೋಟೆ ಹೋಬಳಿಯಲ್ಲಿ 98 ಮನೆಗಳು, ಚನ್ನಪಟ್ಟಣದಲ್ಲಿ 28 ಮನೆಗಳು, ಹೊಳೆನರಸೀಪುರದಲ್ಲಿ 5 ಮತ್ತು ಗನ್ನಿಕಡದಲ್ಲಿ ಹಲವು ಮನೆಗಳು ಕುಸಿದಿವೆ. ಚನ್ನರಾಯಪಟ್ಟಣದ 78 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದರು.

ಪ್ರತಿದಿನವೂ ಸಂತ್ರಸ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ಅದಕ್ಕೆ ಅನುಗುಣವಾಗಿ ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಹೀಗಾಗಿ ಹೊಳೆನರಸೀಪುರದಲ್ಲಿ 1 ಸಕಲೇಶಪುರದಲ್ಲಿ 6 ಬೇಲೂರಿನಲ್ಲಿ 4 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ ಮತ್ತು ಜಾನುವಾರುಗಳಿಗಾಗಿ ಗೋಶಾಲೆಯನ್ನು ಆರಂಭಿಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದರು.

ಚೆಸ್ಕಾಂ ಅಧಿಕಾರಿಗಳಿಗೆ ಜಲಾವೃತ ಸ್ಥಳಗಳಲ್ಲಿ ವಿದ್ಯುತ್ ಕಡಿತ ಮಾಡಲು ಹೇಳಲಾಗಿದೆ. ಚನ್ನಪಟ್ಟಣದಲ್ಲಿ ವಿದ್ಯುತ್ ಸ್ಪರ್ಶಿಸಿ ಹೋಗಿದ್ದಾರೆ ಹಾಗಾಗಿ ಜನರು ವಿದ್ಯುತ್ ಅಪಾಯದ ಬಗ್ಗೆ ಜಾಗೃತರಾಗಿರಿ ಎಂದು ಹೇಳಿದರು.

ಜಿಲ್ಲೆಯಲ್ಲಿ ಸಂತ್ರಸ್ತರ ತಾತ್ಕಾಲಿಕ ಪರಿಹಾರ ಐದು ಕೋಟಿ ಅನುದಾನ ಬಂದಿದ್ದು, ಅದು ಸಾಕಾಗುತ್ತಿಲ್ಲ ಇನ್ನು 10 ಕೋಟಿ ಹಣದ ಅಗತ್ಯವಿದೆ ಅದನ್ನು ಸರ್ಕಾರ ಕೂಡಲೇ ನೀಡಬೇಕು ಎಂದು ಮನವಿ ಮಾಡಿದರು.

Conclusion:ಜಿಲ್ಲೆಯ ದಂಡಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಉಪವಿಭಾಗಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದಾರೆ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಂ ಪ್ರಕಾಶ್ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಮಾಜಿ ಹೂಡಾ ಅಧ್ಯಕ್ಷ ರಾಜೇಗೌಡ, ಜಿಲ್ಲಾ ಪಂಚಾಯತ್ ಸದಸ್ಯೆ ಜಯಮ್ಮ ಮತ್ತಿತರರು ಹಾಜರಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.