ಚನ್ನರಾಯಪಟ್ಟಣ/ಹಾಸನ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಾಳೇನಹಳ್ಳಿ ಬಳಿ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾಳೇನಹಳ್ಳಿ ಬಳಿ ನಿನ್ನೆ ಈ ಘಟನೆ ಸಂಭವಿಸಿದ್ದು, ಯಾಚೇನಹಳ್ಳಿ ಗ್ರಾಮದ ನಿವಾಸಿ ಆನಂದ ಅಲಿಯಾಸ್ ಶಿವಕುಮಾರ್ (21) ಎಂಬಾತ ಬರ್ಬರವಾಗಿ ಕೊಲೆಯಾಗಿದ್ದಾನೆ.
ಈ ಸುದ್ದಿಯನ್ನೂ ಓದಿ: ನಿವೇಶನ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ: ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ
ಎರಡು ದಿನಗಳ ಹಿಂದೆ ಗ್ರಾಮದ ಯುವಕರ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ರಾಜಿ ಸಂಧಾನಕ್ಕೆ ಕರೆದು ಯುವಕನ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.