ETV Bharat / state

ವೃದ್ಧ ದಂಪತಿ ಕೊಲೆ ಪ್ರಕರಣ: ಫೈರಿಂಗ್ ಆದ ಸ್ಥಳಕ್ಕೆ ದಕ್ಷಿಣ ವಲಯ ಐಜಿ ಭೇಟಿ - ಚನ್ನರಾಯಪಟ್ಟಣ ಹಾಸನ ಲೆಟೆಸ್ಟ್ ನ್ಯೂಸ್

ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈರಿಂಗ್ ನಡೆದ ಸ್ಥಳಕ್ಕೆ ದಕ್ಷಿಣ ವಲಯ ಐಜಿ ವಿಫುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

IG Viful Kumar
ಐಜಿ ವಿಫುಲ್ ಕುಮಾರ್
author img

By

Published : Sep 1, 2020, 12:10 PM IST

ಚನ್ನರಾಯಪಟ್ಟಣ: ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಚನ್ನರಾಯಪಟ್ಟಣ ಪೊಲೀಸರಿಂದ ಫೈರಿಂಗ್ ನಡೆದಿದ್ದು, ಫೈರಿಂಗ್ ಆದ ಸ್ಥಳಕ್ಕೆ ದಕ್ಷಿಣ ವಲಯ ಐಜಿ ವಿಫುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಫೈರಿಂಗ್ ಆದ ಜಾಗಕ್ಕೆ ದಕ್ಷಿಣ ವಲಯ ಐಜಿ ವಿಫುಲ್ ಕುಮಾರ್ ಭೇಟಿ

ಆಗಸ್ಟ್ 29ರಂದು ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಬೆನ್ನತ್ತಿದ್ದ ಚನ್ನರಾಯಪಟ್ಟಣದ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಬರಗೂರು ಗ್ರಾಮದ ಆರೋಪಿಯನ್ನು ಪೊಲೀಸರು ಹಿಡಿಯಲು ಮುಂದಾಗಿದ್ದು, ಕಾರ್ಯಾಚರಣೆ ವೇಳೆ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿತ್ತು. ಸದ್ಯ ಫೈರಿಂಗ್ ಆದ ಜಾಗಕ್ಕೆ ದಕ್ಷಿಣ ವಲಯ ಐಜಿ ವಿಫುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ವೃದ್ಧ ದಂಪತಿ ಕೊಲೆ ಪ್ರಕರಣ: ಶಂಕಿತ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್​​

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿಫುಲ್ ಕುಮಾರ್, ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಲು ಬಂದಿದ್ದರು. ವಾರ್ನಿಂಗ್ ಸಹ ಕೊಟ್ಟಿದ್ದರು. ಆದರೆ ಅವರು ಚಾಕುವಿನಲ್ಲಿ ನಮ್ಮ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆ ನಮ್ಮ ಒಬ್ಬ ಪೊಲೀಸ್ ಅಧಿಕಾರಿ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ಮಾಡಿದ ಗುಂಡು ಕಾಲಿಗೆ ಬಿದ್ದಿದ್ದರಿಂದ ಅವರನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಇಬ್ಬರು ಪೊಲೀಸ್ ಅಧಿಕಾರಿಗಳು ಹಾಗೂ ಆರೋಪಿ ಸೇಫ್ ಆಗಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.