ಹಾಸನ : ನಾಳೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾವುದೇ ಬೇಧ ಭಾವವಿಲ್ಲದೆ ಎಲ್ಲರಿಗೂ ಪಕ್ಷ ಗೌರವ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟ ಪಡಿಸಿದ್ದಾರೆ.
ಹಾಸನ ಹೊರವಲಯದ ಕಂದಲಿ ಬಳಿ ಸುದ್ದಿ ಮಿತ್ರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಮೂಲ ಬಿಜೆಪಿಗರು, ವಲಸೆ ಬಿಜೆಪಿಗರು ಎಂಬುವುದು ಇಲ್ಲ. ಸಚಿವ ಸ್ಥಾನ ಯಾರಿಗೆ ಸಿಗಲಿದೆ ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು.
ಸಚಿವ ಸ್ಥಾನ ಹಂಚಿಕೆಯ ಬಳಿಕ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ ಎಂಬುದು ಮಾಧ್ಯಮಗಳ ಸೃಷ್ಟಿ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದರು.
ಸಿಎಂ ಬದಲಾವಣೆಯ ಕುರಿತು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷದ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದಕ್ಕೆ ಸಿದ್ದರಾಮಯ್ಯ ಹೇಗೆ ನಿರ್ಧಾರ ಮಾಡುತ್ತಾರೆ? ಅವರೇನು ನಮ್ಮ ಪಾರ್ಟಿಯವರಾ ಎಂದು ಪ್ರಶ್ನೆ ಮಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಮೊದಲು ಅವರ ಸ್ಥಾನ ಉಳಿಸಿಕೊಳ್ಳಲು ಯೋಚನೆ ಮಾಡಲಿ. ನಮ್ಮ ಪಕ್ಷ ಯಾವುದೇ ಕಾರಣಕ್ಕೂ ಏನೂ ಆಗುವುದಿಲ್ಲ ಎಂದರು.