ETV Bharat / state

ಇಂದು ಹಾಸನದಲ್ಲಿ 250 ಕೊರೊನಾ ಪ್ರಕರಣ ಪತ್ತೆ: 9 ಮಂದಿ ಸಾವು - Corona Cases in Hassan

ಸೋಮವಾರ ದಾಖಲಾಗಿರುವ ಕೊರೊನಾ ಪ್ರಕರಣಗಳ ಪೈಕಿ ಆಲೂರಿನಲ್ಲಿ 11, ಅರಕಲಗೂಡಿನಲ್ಲಿ 20, ಅರಸೀಕೆರೆಯಲ್ಲಿ 17, ಬೇಲೂರಿನಲ್ಲಿ 21, ಚನ್ನರಾಯಪಟ್ಟಣದಲ್ಲಿ 20, ಹಾಸನದಲ್ಲಿ 139, ಹೊಳೆನರಸೀಪುರದಲ್ಲಿ 12, ಸಕಲೇಶಪುರದಲ್ಲಿ 5 ಹಾಗೂ ಇತರೆ 5 ಪ್ರಕರಣಗಳು ದಾಖಲಾಗಿದ್ದು, ಒಟ್ಟು 250 ಪಾಸಿಟಿವ್ ಪ್ರಕರಣ ದಾಖಲಾಗಿವೆ. ಇನ್ನು, ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 4,821ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
author img

By

Published : Aug 17, 2020, 8:24 PM IST

ಹಾಸನ: ಜಿಲ್ಲೆಯಲ್ಲಿ 250 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 9 ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸೋಮವಾರ ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರಿನಲ್ಲಿ 11, ಅರಕಲಗೂಡಿನಲ್ಲಿ 20, ಅರಸೀಕೆರೆಯಲ್ಲಿ 17, ಬೇಲೂರಿನಲ್ಲಿ 21, ಚನ್ನರಾಯಪಟ್ಟಣದಲ್ಲಿ 20, ಹಾಸನದಲ್ಲಿ 139, ಹೊಳೆನರಸೀಪುರದಲ್ಲಿ 12, ಸಕಲೇಶಪುರದಲ್ಲಿ 5 ಹಾಗೂ ಇತರೆ 5 ಪ್ರಕರಣಗಳು ದಾಖಲಾಗಿದ್ದು, ಒಟ್ಟು 250 ಪಾಸಿಟಿವ್ ಪ್ರಕರಣ ದಾಖಲಾಗಿವೆ. ಇನ್ನು, ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 4,821ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇಂದು 275 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಇದುವರೆಗೆ 3037 ಮಂದಿ ಬಿಡುಗಡೆಯಾಗಿದ್ದಾರೆ. 1648 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 136 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದರು.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಇದ್ದರೆ ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.