ETV Bharat / state

​ಹಾಸನದಲ್ಲಿ ಇದುವರೆಗೂ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ - ಜಿಲ್ಲಾಧಿಕಾರಿ ಆರ್. ಗಿರೀಶ್ ಲೆಟೆಸ್ಟ್​ ನ್ಯೂಸ್​

ನಿಜಾಮುದ್ದೀನ್ ಸಮಾವೇಶದಲ್ಲಿ ಹಾಸನನಿಂದ 6 ಜನರು ಭಾಗವಹಿಸಿದ್ದರು. ಅವರನ್ನು ಪ್ರತ್ಯೇಕವಾಗಿಟ್ಟು ನಿಗಾ ವಹಿಸಲಾಗಿದೆ. ಈವರೆಗೆ ​ಹಾಸನದಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.

no corona positive case has been found in Hassan
​ಹಾಸನದಲ್ಲಿ ಇದುವರೆಗೂ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ
author img

By

Published : Apr 2, 2020, 6:48 PM IST

ಹಾಸನ: ದೆಹಲಿಯಲ್ಲಿ ನಡೆದ ನಿಜಾಮುದ್ದೀನ್ ಧರ್ಮಸಭೆಯಲ್ಲಿ ಹಾಸನದಿಂದ 6 ಜನ ಭಾಗವಹಿಸಿದ್ದು, ಅವರನ್ನು ಪ್ರತ್ಯೇಕವಾಗಿಟ್ಟು ನಿಗಾ ವಹಿಸಲಾಗಿದೆ. ಈವರೆಗೆ ಅವರಲ್ಲಿ ಕೊರೊನಾದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.

ಆರ್. ಗಿರೀಶ್, ಜಿಲ್ಲಾಧಿಕಾರಿ
ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಿಂದ ತೆರಳಿದ್ದ ಜನರ ಬಗ್ಗೆ ಮಾಹಿತಿ ಇದ್ದು, ಅವರಲ್ಲಿ 6 ಮಂದಿ ಹಾಸನದಲ್ಲಿಯೇ ಇದ್ದಾರೆ. ಉಳಿದರು ದೆಹಲಿ, ವಾರಂಗಲ್, ಕುಂದಾಪುರ, ಜಮ್ಮು ಕಾಶ್ಮೀರದಲ್ಲಿ ಇರುವ ಮಾಹಿತಿ ಬಂದಿದೆ.
ಹಾಸನ ಜಿಲ್ಲೆಯ 6 ಜನರನ್ನು ಪ್ರತ್ಯೇಕಿಸಿ ನಿಗಾವಹಿಸಲಾಗಿದೆ. ಇದುವರೆಗೂ ಇವರಲ್ಲಿ ಯಾರಿಗೂ ಕೊರೊನಾದ ಲಕ್ಷಣಗಳು ಕಂಡು ಬಂದಿಲ್ಲ ಎಂದರು. 6 ಮಂದಿಯಲ್ಲಿ ಒಬ್ಬರು ಕೊಡಗಿನ ಭಾಗಕ್ಕೆ ಸೇರಿದವರಾಗಿದ್ದು, ಅವರು ಹೋಮ್ ಕ್ವಾರಂಟೈನ್​ನಲ್ಲಿ ಇದ್ದಾರೆ.
​ಹಾಸನದಲ್ಲಿ ಇದುವರೆಗೂ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಕೊರೊನಾ ತಡೆಗಟ್ಟಲು ಎಲ್ಲಾ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.