ಹಾಸನ: ಚನ್ನರಾಯಪಟ್ಟಣದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆ ಹಿನ್ನೆಲೆ ತಾಲೂಕಿನ ನುಗ್ಗೆಹಳ್ಳಿ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ತುಮಕೂರು ಜಿಲ್ಲೆಗೆ ತೆರಳಿ ಕರ್ತವ್ಯ ನಿರ್ವಹಿಸಿ ಹಿಂದಿರುಗಿದ್ದ ಕಾನ್ಸ್ಟೇಬಲ್ ಅವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಹಾಗಾಗಿ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಇನ್ನು ಕಚೇರಿಯನ್ನು ಠಾಣೆಯ ಸಮೀಪದ ಹಾಸ್ಟೆಲ್ಗೆ ಸ್ಥಳಾಂತರ ಮಾಡಲಾಗಿದೆ.