ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
ಉಪ ವಿಭಾಗಾಧಿಕಾರಿ ಹಾಗೂ ಹಾಸನಾಂಬ, ಸಿದ್ದೇಶ್ವರ ದೇವಾಲಯಗಳ ಆಡಳಿತಾಧಕಾರಿ ಬಿ.ಎ.ಜಗದೀಶ್ ಅವರ ನೇತೃತ್ವದಲ್ಲಿ ದೇವಾಲಯದ ಆವರಣ ಹಾಗೂ ಅಕ್ಕಪಕ್ಕದ ರಸ್ತೆಗಳಲ್ಲಿ ಪರಿಶೀಲನೆ ನಡೆಸಲಾಯಿತು.
ಈ ವೇಳೆ ಡಿವೈಎಸ್ಪಿ ಪುಟ್ಟಸ್ವಾಮಿಗೌಡ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಸಂಜಯ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್, ತಹಶೀಲ್ದಾರ್ ಶಿವಶಂಕರಪ್ಪ ಮತ್ತಿತರರು ಹಾಜರಿದ್ದರು.