ಹಾಸನ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಗೌಡ ಮತ್ತು ಅಪರ ಜಿಲ್ಲಾಧಿಕಾರಿ ವೈಶಾಲಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಒಂದು ವರ್ಷ ಪೂರೈಸುವ ಮುನ್ನವೇ ಎಸ್ಪಿ ಪ್ರಕಾಶ್ ಗೌಡ ಅವರನ್ನು ವರ್ಗಾವಣೆ ಮಾಡಿದ್ದು, ತೆರವಾಗುವ ಸ್ಥಾನಕ್ಕೆ ಬೆಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಡಾ. ರಾಮ್ ನಿವಾಸ್ ಸೆಪಟ್ ಅವರನ್ನು ವರ್ಗಾಯಿಸಲಾಗಿದೆ. ಅಪರ ಜಿಲ್ಲಾಧಿಕಾರಿ ವೈಶಾಲಿ ಅವರನ್ನು ಶಿವಮೊಗ್ಗದ ಜಿಲ್ಲಾ ಪಂಚಾಯತಿಗೆ ವರ್ಗಾವಣೆ ಮಾಡಲಾಗಿದೆ.