ETV Bharat / state

ಸ್ಕೂಟರ್​ಗೆ ಒಮ್ನಿ ಕಾರು ಡಿಕ್ಕಿ: ಸ್ಥಳದಲ್ಲೇ ಬಾಲಕ ಸಾವು

author img

By

Published : Dec 4, 2020, 2:30 PM IST

ಒಮ್ನಿ ಕಾರು ಮತ್ತು ಸ್ಕೂಟರ್​ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಅರಸೀಕೆರೆ ಪಟ್ಟಣದ ಎಪಿಎಂಸಿ ಗೇಟ್ ಮುಂಭಾಗದಲ್ಲಿ ನಡೆದಿದೆ.

ಸ್ಥಳದಲ್ಲೇ ಬಾಲಕ ಸಾವು
ಸ್ಥಳದಲ್ಲೇ ಬಾಲಕ ಸಾವು

ಹಾಸನ: ಒಮ್ನಿ ಕಾರು ಮತ್ತು ಸ್ಕೂಟರ್​ ನಡುವೆ ನಡೆದ ಅಪಘಾತದಲ್ಲಿ ಪುಟ್ಟ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ಪಟ್ಟಣದ ಎಪಿಎಂಸಿ ಗೇಟ್ ಮುಂಭಾಗದಲ್ಲಿ ನಡೆದಿದೆ. ಮಗನ ಸಾವಿನಿಂದಾಗಿ ತಂದೆ-ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಕೂಟರ್
ಅಪಘಾತಕ್ಕೊಳಗಾದ ಸ್ಕೂಟರ್

ತುತ್ತಿನ ಚೀಲ ತುಂಬಿಸಿಕೊಳ್ಳಲು ಗಂಡ-ಹೆಂಡತಿ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದರು. ಮಗ ಚಿಕ್ಕವನಾಗಿದ್ದರಿಂದ ಮನೆಯಲ್ಲಿ ಒಬ್ಬನನ್ನೇ ಬಿಟ್ಟು ಹೋಗಲು ಸಾಧ್ಯವಾಗದ ಕಾರಣ ಆತನನ್ನೂ ಜೊತೆಯಲ್ಲಿಯೇ ಕರೆದುಕೊಂಡು ಸ್ಕೂಟರ್​ನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಒಮ್ನಿ ಕಾರು
ಒಮ್ನಿ ಕಾರು

ಶಾಲೆಗೆ ರಜೆಯಿದ್ದ ಕಾರಣ ಪ್ರತಿನಿತ್ಯ ಕೆಲಸಕ್ಕೆ ಹೋಗುವಾಗ ಮಗನನ್ನು ಕೂಡ ಆಕೆ ಕರೆದುಕೊಂಡು ಹೋಗುತ್ತಿದ್ದರು. ಆದ್ರೆ ಇಂದು ಎದುರಿನಿಂದ ಬಂದ ಯಮಸ್ವರೂಪಿ ಮಾರುತಿ ಒಮ್ನಿ ಕಾರು ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 4 ವರ್ಷದ ಬಾಲಕ ಯೋಗೇಶ್ ಮೃತಪಟ್ಟಿದ್ದಾನೆ. ಘಟನೆಗೆ ಕಾರು ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗವೇ ಕಾರಣ ಎನ್ನಲಾಗಿದೆ.

ಓದಿ: ಒತ್ತಾಯಪೂರ್ವಕ ಬಂದ್ ಮಾಡಿಸಿದ್ರೆ ಕ್ರಮ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಘಟನೆಯಲ್ಲಿ ಗಂಡ-ಹೆಂಡತಿಗೆ ಗಂಭೀರ ಗಾಯಗಳಾಗಿದ್ದು, ತಾಯಿಯ ಕೈ ಮತ್ತು ಕಾಲಿಗೆ ಪೆಟ್ಟಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಅರಸೀಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅರಸೀಕೆರೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.