ETV Bharat / state

ಹಾಸನದ ಕೊಣನೂರಿನಲ್ಲಿ ಮಹಿಳೆಯಲ್ಲಿ ಕೊರೊನಾ ಪತ್ತೆ - Konanuru corona latest news

ಈ ಹಿಂದೆ ಬೆಂಗಳೂರಿನಿಂದ ಬಂದಿದ್ದ ಗೊಬ್ಬಳಿಕಾವಲು ಗ್ರಾಮದ 23 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ತರಿಗಳಲೆ ಮತ್ತು ಗೊಬ್ಬಳಿಕಾವಲು ಗ್ರಾಮಗಳಿಗೆ ಸ್ಯಾನಿಟೈಸ್ ಮಾಡಿ ಸೀಲ್‌ಡೌನ್ ಮಾಡಿದ್ದಾರೆ..

Konanuru
Konanuru
author img

By

Published : Jun 28, 2020, 8:24 PM IST

ಕೊಣನೂರು(ಹಾಸನ): ಎರಡು ದಿನಗಳ ಹಿಂದೆ ಗ್ರಾಮದ ಯುವಕನೊಬ್ಬನಿಗೆ ಕೊರೊನಾ ಸೋಂಕು ತಗುಲಿದ್ದ ಬೆನ್ನಲ್ಲೇ ಇಂದು 40 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಂಕಿತ ಮಹಿಳೆಯನ್ನು ಹಾಸನದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಬೆಂಗಳೂರಿನಿಂದ ಬಂದಿದ್ದ ಗೊಬ್ಬಳಿಕಾವಲು ಗ್ರಾಮದ 23 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ, ಕಂದಾಯ ಮತ್ತು ಗ್ರಾಪಂ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ತರಿಗಳಲೆ ಮತ್ತು ಗೊಬ್ಬಳಿಕಾವಲು ಗ್ರಾಮಗಳಿಗೆ ಸ್ಯಾನಿಟೈಸ್ ಮಾಡಿ ಸೀಲ್‌ಡೌನ್ ಮಾಡಿದ್ದಾರೆ.

ಯುವಕ ಚಿಕಿತ್ಸೆಗಾಗಿ ಕೊಣನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರ ಕುರಿತು ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ನಿರೀಕ್ಷಕ ಆನಂದಗೌಡ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.