ETV Bharat / state

ಹಾಸನ ಜಿಲ್ಲೆಯಲ್ಲಿ ಕಿಲ್ಲರ್​ ಕೊರೊನಾಗೆ ವೃದ್ಧ ಬಲಿ: ಮತ್ತೆ 13 ಜನರಿಗೆ ಸೋಂಕು ದೃಢ - ಕೋವಿಡ್ ಸಾವು

ಕಿಲ್ಲರ್​ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಒಟ್ಟು 8 ಜನ ಮೃತಪಟ್ಟಿದ್ದಾರೆ. ಹೊಸದಾಗಿ 13 ಪ್ರಕರಣಗಳು ವರದಿಯಾಗಿವೆ. ಅರಸೀಕೆರೆ ತಾಲೂಕಿನಲ್ಲಿ 5, ಚನ್ನರಾಯಪಟ್ಟಣದ 1 ಪ್ರಕರಣ, ಹಾಸನದಲ್ಲಿ 7 ಪ್ರಕರಣ ಸೇರಿ ಒಟ್ಟು 13 ಪ್ರಕರಣ ಬಂದಿವೆ. ಜಿಲ್ಲೆಯಲ್ಲಿ ಒಟ್ಟು 492 ಕೊರೊನಾ ಪಾಸಿಟಿವ್ ಕೇಸ್​ಗಳು ದಾಖಲಾಗಿವೆ.

13 more positive cases in hassan district

author img

By

Published : Jul 5, 2020, 4:33 PM IST

Updated : Jul 5, 2020, 6:06 PM IST

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೆ ಹೆಚ್ಚಾಗುತ್ತಿದ್ದು, ಭಾನುವಾರ ಕೂಡ 13 ಜನರಿಗೆ ಕೋವಿಡ್ ವೈರಸ್ ಹರಡಿದೆ. ಇಂದು ಓರ್ವ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.​

ಅರಸೀಕೆರೆ ನಿವಾಸಿ 77 ವರ್ಷದ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ನ್ಯುಮೋನಿಯಾ, ರಕ್ತದೊತ್ತಡ ಸೇರಿದಂತೆ ಇತರೆ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜುಲೈ 3 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆ ಮಾಡಲಾಗಿ, ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಒಟ್ಟು 8 ಜನ ಮೃತಪಟ್ಟಿದ್ದಾರೆ. ಹೊಸದಾಗಿ 13 ಪ್ರಕರಣಗಳು ವರದಿಯಾಗಿವೆ. ಅರಸೀಕೆರೆ ತಾಲೂಕಿನಲ್ಲಿ 5, ಚನ್ನರಾಯಪಟ್ಟಣದ 1 ಪ್ರಕರಣ, ಹಾಸನದಲ್ಲಿ 7 ಪ್ರಕರಣ ಸೇರಿ ಒಟ್ಟು 13 ಪಾಸಿಟಿವ್​ ಬಂದಿವೆ. ಜಿಲ್ಲೆಯಲ್ಲಿ ಒಟ್ಟು 492 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 255 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 299 ಜನ ಚಿಕಿತ್ಸೆ ಪಡೆಯುತ್ತಿರುವುದಾಗಿ ಆರೋಗ್ಯಾಧಿಕಾರಿ ಡಾ. ಸತೀಶ್ ಮಾಹಿತಿ ನೀಡಿದರು.

ಹಾಸನ ಜಿಲ್ಲೆಯಲ್ಲಿ ಕಿಲ್ಲರ್​ ಕೊರೊನಾಗೆ ವೃದ್ಧ ಬಲಿ

ಹಾಸನ ​ಜಿಲ್ಲೆಯಲ್ಲಿ ತಾಲೂಕುವಾರು ಕೋವಿಡ್ ಪ್ರಕರಣಗಳು:

1. ಆಲೂರು - 20

2. ಅರಕಲಗೂಡು - 21

3. ಅರಸೀಕೆರೆ - 62

4. ಬೇಲೂರು - 12

5. ಚನ್ನರಾಯಪಟ್ಟಣ - 230

6. ಹಾಸನ - 79

7. ಹೊಳೆನರಸೀಪುರ - 72

8. ಸಕಲೇಶಪುರ - 2

9. ಇತರೆ 4 ಪ್ರಕರಣಗಳು

ಒಟ್ಟು: 492 ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ.

Last Updated : Jul 5, 2020, 6:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.