ETV Bharat / state

ಆನ್‌ಲೈನ್ ಅಪ್ಲಿಕೇಶನ್ ಬಳಸಿ ಕ್ರಿಕೆಟ್ ಬೆಟ್ಟಿಂಗ್: ಐವರ ಬಂಧನ - ಅಪ್ಲಿಕೇಶನ್ ಬಳಕೆ ಮಾಡಿ ಕ್ರಿಕೆಟ್ ಬೆಟ್ಟಿಂಗ್

ಹಾಸನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಈ ಸಂಬಂಧ ಐವರನ್ನು ಬಂಧಿಸಲಾಗಿದೆ. ಇವರಲ್ಲಿ ಆಕಾಶ್ ಎನ್ನುವ ಬುಕ್ಕಿಯಿಂದ ಹೆಚ್ಚಿನ ಮಾಹಿತಿ ಪಡೆಯಲಾಗಿದೆ. ಬೆಂಗಳೂರಿನಲ್ಲಿ ಈ ಜಾಲ ಇರುವ ಬಗ್ಗೆ ಮಾಹಿತಿ ದೊರಕಿದೆ. ಈ ಸಂಬಂಧ ಪೊಲೀಸ್ ತಂಡ ರಚಿಸಿ ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ.

online Cricket Betting: 5 arrest
ಐವರ ಬಂಧನ
author img

By

Published : Sep 25, 2020, 10:20 PM IST

ಹಾಸನ: ಆನ್‌ಲೈನ್ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ​ ಕುರಿತು ಪೋಷಕರು ಮಕ್ಕಳ ಬಗ್ಗೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಈ ಸಂಬಂಧ ಐವರನ್ನು ಬಂಧಿಸಲಾಗಿದೆ. ಇವರಲ್ಲಿ ಆಕಾಶ್ ಎನ್ನುವ ಬುಕ್ಕಿಯಿಂದ ಹೆಚ್ಚಿನ ಮಾಹಿತಿ ಪಡೆಯಲಾಗಿದೆ. ಬೆಂಗಳೂರಿನಲ್ಲಿ ಈ ಜಾಲ ಇರುವ ಬಗ್ಗೆ ಮಾಹಿತಿ ದೊರಕಿದೆ. ಈ ಸಂಬಂಧ ಪೊಲೀಸರ ತಂಡ ರಚಿಸಿ ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ

ಮನೆಯಲ್ಲಿರುವ ಮಕ್ಕಳ ಬಗ್ಗೆ ಪೋಷಕರು ನಿಗಾವಹಿಸಬೇಕು. ಇಂತಹ ಚಟಕ್ಕೆ ಮಕ್ಕಳು ಬಿದ್ದಿದ್ದರೆ ನಮಗೆ ಕೂಡಲೇ ಮಾಹಿತಿ ನೀಡಬೇಕು. ಬೆಟ್ಟಿಂಗ್​ನಿಂದ ಮನೆ ಮಠ ಮಾರಿಕೊಂಡು ಬೀದಿ ಪಾಲಾಗಿದ್ದಾರೆ ಎಂದು ಎಚ್ಚರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.