ETV Bharat / state

ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಎಲ್ಲಾ ಚಟುವಟಿಕೆಗಳಿಗೆ ಅವಕಾಶ.. ಹಾಸನ ಎಸ್ಪಿ - ಹಾಸನ ಎಸ್ಪಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್​ಡೌನ್ ಜಾರಿಗೆ ಬಂದ ದಿನದಿಂದ ಈವರೆಗೂ ಯಶಸ್ವಿಯಾಗಿದ್ದು, ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ.

Opportunity for all activities from Hassan SP
ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಎಲ್ಲಾ ಚಟುವಟಿಕೆಗಳಿಗೆ ಅವಕಾಶ: ಹಾಸನ ಎಸ್ಪಿ..!
author img

By

Published : May 5, 2020, 6:00 PM IST

ಹಾಸನ : ಹಸಿರು ವಲಯದಲ್ಲಿರುವ ಜಿಲ್ಲೆಯಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ವಾರದ ಏಳು ದಿನಗಳೂ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಎಲ್ಲಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್​ಡೌನ್ ಜಾರಿಗೆ ಬಂದ ದಿನದಿಂದ ಈವರೆಗೂ ಯಶಸ್ವಿಯಾಗಿದ್ದು, ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ. ಇಷ್ಟು ದಿನ ಹಸಿರು ಜಿಲ್ಲೆಯಾಗಿರುವಂತೆ ಮುಂದೆಯೂ ಕೂಡ ಪ್ರಕರಣ ದಾಖಲಾಗದಂತೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಮುಂದೆ ವಾರದ 7 ದಿನಗಳು ಕೂಡ ಎಲ್ಲಾ ಚಟುವಟಿಕೆಗಳು ನಡೆಯಲಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದೆ ಮನೆಯಿಂದ ಯಾರೂ ಬರಬಾರದು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಏನೂ ಕೆಲಸವಿಲ್ಲದೆ ಪ್ರತಿ ದಿನ ಅನಗತ್ಯ ಹೊರಗೆ ಬರಬೇಡಿ ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.