ಹಾಸನ: ಮುಂಬೈನ ದಾದರ್ನಲ್ಲಿರುವ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ನಡೆಸಿದವರನ್ನು ಬಂಧಿಸಬೇಕು ಹಾಗೂ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಪರಿವರ್ತನಾ ವೇದಿಕೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.
ದುಷ್ಕರ್ಮಿಗಳು ಅಂಬೇಡ್ಕರ್ ಮನೆಯಲ್ಲಿನ ಸಿಸಿ ಕ್ಯಾಮೆರಾ, ಕಿಟಕಿ ಗಾಜುಗಳನ್ನು ಪುಡಿ ಮಾಡಿದ್ದು ಮತ್ತು ಹೂವಿನ ಗಿಡಗಳನ್ನು ಧ್ವಂಸ ಮಾಡಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.