ETV Bharat / state

ಅರಕಲಗೂಡು: ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು - Bus Accident in Arakalagudu of Hassan

ಅರಕಲಗೂಡು ತಾಲೂಕಿನ ಐಬಿ ಸರ್ಕಲ್​ನಲ್ಲಿ ಬಸ್​ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ.

Pedestrian woman dies in KSRTC bus collision
ಅರಕಲಗೂಡು ಬಳಿ ಬಸ್​ ಡಿಕ್ಕಿಯಾಗಿ ಮಹಿಳೆ ಸಾವು
author img

By

Published : Nov 17, 2020, 8:12 PM IST

ಅರಕಲಗೂಡು : ತಾಲೂಕಿನ ರಾಮನಾಥಪುರ ಹೋಬಳಿಯ ಐಬಿ ಸರ್ಕಲ್​ನಲ್ಲಿ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟಿದ್ದಾರೆ.

ರಾಮನಾಥಪುರ ನಿವಾಸಿ ಲಕ್ಷಮ್ಮ (35) ಮೃತ ದುರ್ದೈವಿ. ಲಕ್ಷಮ್ಮ ಮತ್ತು ಲಕ್ಷೀದೇವಿ ಇಬ್ಬರು ಕೂಲಿ ಕೆಲಸಕ್ಕೆಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮೈಸೂರು ಕಡೆಯಿಂದ ಬಂದ ಬಸ್ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಲಕ್ಷಮ್ಮಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೊಣನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಲಕ್ಷಿದೇವಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ

ಮೃತ ಲಕ್ಷಮ್ಮರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು , ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೊಣನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.