ETV Bharat / state

ಫೋನ್ ಕದ್ದಾಲಿಕೆ ಪ್ರಕರಣ: ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಸೂಕ್ತ ತನಿಖೆಗೆ ಆಗ್ರಹ - ರಾಜ್ಯ ಬಿಜೆಪಿ ರೈತ ಮೋರ್ಚಾ

ರಾಜ್ಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಇದರಲ್ಲಿ ಭಾಗಿಯಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ಆಗಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾದ ಮುಖಂಡ ಬೆಣ್ಣೂರು ರೇಣುಕುಮಾರ್ ಆಗ್ರಹಿಸಿದ್ದಾರೆ.

ಬೆಣ್ಣೂರು ರೇಣುಕುಮಾರ್
author img

By

Published : Aug 17, 2019, 3:15 AM IST

ಹಾಸನ: ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಣ್ಣೂರು ರೇಣುಕುಮಾರ್​ ಅವರು, ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲು ತೀರ್ಮಾನಿಸಿದೆ. ಹಲವು ಹಿರಿಯ ಪೊಲೀಸರೂ ಇದರಲ್ಲಿ ಭಾಗಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ರಜೆ ಹಾಕಿ ತನಿಖೆಗೆ ಸಹಕರಿಸಬೇಕು ಎಂದರು.

ರಾಜ್ಯ ಬಿಜೆಪಿ ರೈತ ಮೋರ್ಚಾದ ಮುಖಂಡ ಬೆಣ್ಣೂರು ರೇಣುಕುಮಾರ್

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಈ ಫೋನ್ ಕದ್ದಾಲಿಕೆ ನಡೆದಿರುವುದು ಸಾಬೀತಾಗಿದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೌಲ್ಯಯುತ ರಾಜಕಾರಣಕ್ಕೆ ಬೆಲೆ ಕೊಡಬೇಕು. ಫೋನ್ ಕದ್ದಾಲಿಕೆ ಪ್ರಕರಣ ನಿಜಕ್ಕೂ ಖಂಡನೀಯ. ಈ ಕುರಿತು ಸೂಕ್ತ ತನಿಖೆ ನಡೆಯಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ್, ಚನ್ನಕೇಶವ, ನಾಗೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Intro:ಹಾಸನ: ಇಡೀ ರಾಜ್ಯದಲ್ಲೇ ಭಾರೀ ಸದ್ದು ಮಾಡುತ್ತಿರುವ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಹಿಂದಿನ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ಆಗಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಮುಖಂಡ ಬೆಣ್ಣೂರು ರೇಣುಕುಮಾರ್ ಆಗ್ರಹಿಸಿದರು.
Body:ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲು ತೀರ್ಮಾನಿಸಿದೆ. ಹಲವು ಹಿರಿಯ ಪೊಲೀಸರೂ ಇದರಲ್ಲಿ ಭಾಗಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ರಜೆ ಹಾಕಿ ತನಿಖೆಗೆ ಸಹಕರಿಸಬೇಕು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಈ ಫೋನ್ ಕದ್ದಾಲಿಕೆ ನಡೆದಿರುವುದು ಸಾಬೀತಾಗಿದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಮೌಲ್ಯಯುತ ರಾಜಕಾರಣಕ್ಕೆ ಬೆಲೆ ಕೊಡಬೇಕೆಂದು ಒತ್ತಾಯಿಸಿದ ಅವರು, ಫೋನ್ ಕದ್ದಾಲಿಕೆ ಪ್ರಕರಣ ನಿಜಕ್ಕೂ ಖಂಡನೀಯ. ಈ ಕುರಿತು ಸೂಕ್ತ ತನಿಖೆ ನಡೆಯಬೇಕೆಂದು ಆಗ್ರಹಿಸಿದರು.
Conclusion:ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ್, ಚನ್ನಕೇಶವ, ನಾಗೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.