ETV Bharat / state

ವಿದೇಶದಿಂದ ಬಂದವರ ಬಗ್ಗೆ ಮಾಹಿತಿ ಕೊಡಿ: ಜಿಲ್ಲಾಧಿಕಾರಿ ಮನವಿ - ಕೊರೋನಾ ವೈರಸ್ ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಡಳಿತ ಸಿದ್ಧ

ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಯೋಗಾಲಯ ಕೇಂದ್ರ ತೆರೆದಿದ್ದು, ಯಾರಾದರೂ ವಿದೇಶದಿಂದ ವಾಪಸ್ ಬಂದಿರುವ ಬಗ್ಗೆ ತಿಳಿದರೆ ಹೆಲ್ಪ್​ಲೈನ್ ನಂಬರ್​ಗೆ ಮಾಹಿತಿ ನೀಡುವ ಮೂಲಕ ಮುಂದಾಗುವ ಅನಾಹುತ ತಡೆಯಬಹುದು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.

DC  Girish
ಜಿಲ್ಲಾಧಿಕಾರಿ ಆರ್. ಗಿರೀಶ್
author img

By

Published : Mar 11, 2020, 1:15 PM IST

ಹಾಸನ: ಆಸ್ಪತ್ರೆಗಳಲ್ಲಿ ಕೊರೋನಾ ವೈರಸ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಯೋಗಾಲಯ ಕೇಂದ್ರ ತೆರೆದಿದ್ದು, ಯಾರಾದರೂ ವಿದೇಶದಿಂದ ವಾಪಸ್ ಬಂದಿರುವ ಬಗ್ಗೆ ತಿಳಿದರೆ ಹೆಲ್ಪ್​ಲೈನ್ ನಂಬರ್​ಗೆ ಮಾಹಿತಿ ನೀಡುವ ಮೂಲಕ ಮುಂದಾಗುವ ಅನಾಹುತ ತಡೆಯಬಹುದು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಫ್ರೆಂಚ್ ದೇಶದಿಂದ ಬಂದಿದ್ದ ನಗರ ನಿವಾಸಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಯಾವ ರೋಗದ ಲಕ್ಷಣಗಳು ಇರುವುದಿಲ್ಲ ಎಂಬುದು ತಿಳಿದು ಬಂದಿದೆ. ಸಾರ್ವಜನಿಕರು ವಿದೇಶದಿಂದ ವಾಪಸ್​​ ಬಂದಿರುವವರ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಹಿಮ್ ಆಸ್ಪತ್ರೆಗೆ ಹಾಗೂ ಆರೋಗ್ಯ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಅದಕ್ಕಾಗಿಯೇ ದಿನ 24 ಗಂಟೆಯ ಸೇವೆಯಲ್ಲಿರುವ ಹೆಲ್ಪ್ ಲೈನ್ ಸಂಖ್ಯೆ 08172-246575 ಕರೆ ಮಾಡಬೇಕೆಂದು ತಿಳಿಸಿದರು.

ಹಿಮ್ಸ್ ಆಸ್ಪತ್ರೆಯಲ್ಲಿ ಕೊರೋನ್ ವೈರಸ್ ಪತ್ತೆ ಪ್ರಯೋಗಾಲಯ ತೆರೆಯಲಾಗಿದೆ. ಹೋಟೆಲ್, ರೆಸಾರ್ಟ್ ಹೋಂ ಸ್ಟೇಗಳಿಗೆ ಆಗಮಿಸುವ ವಿದೇಶಿ ಪ್ರವಾಸಿಗರ ಬಗ್ಗೆ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕ್ಷಿಪ್ರ ಕಾರ್ಯಾಚರಣೆ ತಂಡವನ್ನು ರಚಿಸಲಾಗಿದ್ದು, ತಾಲೂಕು ಮಟ್ಟದಲ್ಲಿ ಆಯಾ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಜವಾಬ್ದಾರಿಯುತ ಅಧಿಕಾರಿಗಳಾಗಿರುತ್ತಾರೆ ಎಂದು ಸೂಚಿಸಿದರು.

ಜಿಲ್ಲಾದ್ಯಂತ ಆರೋಗ್ಯ ಸಂಸ್ಥೆಗಳಿಗೆ ಬೇಡಿಕೆ ಅನುಗುಣವಾಗಿ ಮಾಸ್ಕ್‌ಗಳನ್ನು ವಿತರಿಸಲಾಗಿದೆ. ಪ್ರಸ್ತುತದಲ್ಲಿ 10 ಸಾವಿರ ಮಾಸ್ಕ್​ಗಳ ದಾಸ್ತಾನು ಇರಿಸಲಾಗಿದ್ದು, ಹೆಚ್ಚುವರಿ ಬೇಡಿಕೆ ಬಂದಲ್ಲಿ ಅಗತ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದ್ದು, ಕರಪತ್ರ, ಭಿತ್ತಿಪತ್ರ ಸೇರಿದಂತೆ ವಿವಿಧ ಆರೋಗ್ಯ ಶಿಕ್ಷಣದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಕೊರೊನಾದಿಂದ ಸುರಕ್ಷತೆ ಬಗ್ಗೆ ಸಿದ್ಧವಾಗಿರುವ ವಿಚಾರ ಕುರಿತು ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.