ಹಾಸನ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಹೊಳೆನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುರೇಶ್ (40) ಬಂಧಿತ ಆರೋಪಿ. ಜ.01ರಂದು ಶಾಲೆ ಮುಗಿಸಿ ಮನೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ ತಾನು ಮನೆಗೆ ಹೋಗುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರವೆಸಗಿ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದನು.
ಈ ಸಂಬಂಧ ಸಂತ್ರಸ್ತ ಬಾಲಕಿ ಪೋಷಕರು ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.