ಹಾಸನ: ಪೊಲೀಸ್ ಇನ್ಸ್‌ಪೆಕ್ಟರ್ ದೊಡ್ಡೇಗೌಡ (58) ಗುರುವಾರ ಬೆಳಗ್ಗೆ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಗರ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೂಲತಃ ಆಲೂರು ತಾಲೂಕು ಕಿತಬೂರು ಗ್ರಾಮದ ದೊಡ್ಡೇಗೌಡರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಕಿತಬೂರಿನಲ್ಲಿ ನೆರವೇರಿತು. ಎಎಸ್‌ಪಿ ನಂದಿನಿ ಮತ್ತಿತರ ಪೊಲೀಸ್ ಅಧಿಕಾರಿಗಳು ಗೌರವ ಸಲ್ಲಿಸಿದರು.