ಹಾಸನ/ಗೊರೂರು: ಕೇರಳದಲ್ಲಿ ಅಪಹರಣವಾಗಿದ್ದ ವ್ಯಕ್ತಿಯನ್ನು ಕರ್ನಾಟಕದ ಖಾಕಿ ಪಡೆ ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ರೋಚಕ ಘಟನೆ ಹಾಸನದಲ್ಲಿ ನಡೆದಿದೆ. ಅನ್ವರ್ (33) ಅಪಹರಿಸಲ್ಪಟ್ಟಿದ್ದ ವ್ಯಕ್ತಿಯಾಗಿದ್ದು, ಈತನನ್ನು ಹಾಸನ ಜಿಲ್ಲಾ ಪೊಲೀಸರು ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿರುವ ರೋಚಕ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಈ ಘಟನೆ ನಡೆದಿರುವುದು ಹಾಸನ ಜಿಲ್ಲೆಯ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಕೇರಳದ ಕಾಸರಗೋಡಿನಲ್ಲಿ ಅನ್ವರ್ ಎಂಬಾತನನ್ನು ಹಣದ ವಿಷಯದಲ್ಲಿ ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದರು. ಕಾಸರಗೋಡು ಮಾರ್ಗವಾಗಿ ಅವರು ಕರ್ನಾಟಕ ಗಡಿಭಾಗಕ್ಕೆ ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಾಸನ ಜಿಲ್ಲಾ ಪೊಲೀಸರು ಅನ್ವರ್ ರಕ್ಷಣೆಗೆ ಕಾರ್ಯಪ್ರವೃತ್ತರಾಗಿದ್ದರು.
ಅಪಹರಣಕ್ಕೊಳಗಾಗಿದ್ದ ಕೇರಳ ವ್ಯಕ್ತಿಯನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು: ವಿಡಿಯೋ - kidnaped person rescued
ಅನ್ವರ್ ಎಂಬ ವ್ಯಕ್ತಿಯನ್ನು ಅಪಹರಣ ಮಾಡಿದ ಗ್ಯಾಂಗ್ನಿಂದ ಹಾಸನ ಜಿಲ್ಲಾ ಪೊಲೀಸರು ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿರುವ ರೋಚಕ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.