ETV Bharat / state

ಕೊರೊನಾಕ್ಕೆ ಭಯಪಡುವ ಬದಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಪ್ರಜ್ವಲ್ ರೇವಣ್ಣ - ಜನರು ಕೊರೊನಾ ಮುಂಜಾಗ್ರತ ಕ್ರಮ ತೆಗೆದುಕೊಳ್ಳಿ

ಇಂದು ಸಂಸದ ಪ್ರಜ್ವಲ್ ರೇವಣ್ಣನವರು ನಗರದ ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್​ ವ್ಯವಸ್ಥೆ ಮಾಡಿರುವುದನ್ನು ವೀಕ್ಷಿಸಿದರು.

Prajwal Revanna
ಪ್ರಜ್ವಲ್ ರೇವಣ್ಣ
author img

By

Published : Mar 15, 2020, 7:14 PM IST

ಹಾಸನ: ಸಾರ್ವಜನಿಕರು ಕೊರೊನಾ ಸೋಂಕಿನ ಬಗ್ಗೆ ಆತಂಕ ಪಡುವ ಅವಶ್ಯಕತೆಯಿಲ್ಲ. ಬದಲಾಗಿ ಸೋಂಕು ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.

ಸಂಸದ ಪ್ರಜ್ವಲ್ ರೇವಣ್ಣ ಹಿಮ್ಸ್​ ಆಸ್ಪತ್ರೆಗೆ ಭೇಟಿ ನೀಡಿರುವುದು

ನಗರದ ಹಿಮ್ಸ್ ಆಸ್ಪತ್ರೆಗೆ ಇಂದು ಭೇಟಿ ನೀಡಿ ಕೊರೊನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್​ಗಳನ್ನು ವೀಕ್ಷಣೆ ಮಾಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಂಡಿದ್ದಾರೆ. ಸಿದ್ಧಪಡಿಸಲಾಗಿರುವ ವಾರ್ಡ್​ಗಳಲ್ಲಿ 75 ಹಾಸಿಗೆಗಳನ್ನು ಸೋಂಕಿತರಿಗೆ ಹಾಗೂ 25 ಹಾಸಿಗೆಗಳನ್ನು ಶಂಕಿತರಿಗಾಗಿ ಪ್ರತ್ಯೇಕವಾಗಿ ಮೀಸಲಿಡಲಾಗಿದೆ. ಇದರಿಂದ ಸೋಂಕು ಇಲ್ಲದ ಶಂಕಿತರಿಗೆ ಸೋಂಕಿತರಿಂದ ಪ್ರಭಾವ ಉಂಟಾಗುವುದು ತಪ್ಪುತ್ತದೆ. ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡು ಬಂದಲ್ಲಿ ನಿರ್ಲಕ್ಷಿಸದೆ ತಕ್ಷಣ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಕೊರೊನಾ ಸೋಂಕು ಪತ್ತೆ ಹಚ್ಚುವಲ್ಲಿ ಥರ್ಮಲ್ ಸ್ಕ್ಯಾನರ್​​ಗಳನ್ನು ಎಲ್ಲಾ ತಾಲೂಕುಗಳಲ್ಲಿನ ಬಸ್ ಹಾಗೂ ರೈಲ್ವೆ ನಿಲ್ದಾಣಗಳು ಸೇರಿದಂತೆ ಹೆಚ್ಚು ಜನ ಸೇರುವಂತಹ ಸ್ಥಳಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಅವರಿಗೆ ಸೂಚಿಸಲಾಗಿದೆ. ಪ್ರಸ್ತುತ ಮಾಸ್ಕ್​ಗಳ ಖರೀದಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಮಾರಾಟಗಾರರು ಈ ಅವಕಾಶವನ್ನು ಉಪಯೋಗಿಸಿಕೊಂಡು ಅತೀ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವೇ ಮಾಸ್ಕ್​​ಗಳನ್ನು ನೇರ ಖರೀದಿಸಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಸಾರ್ವಜಿನಿಕರಿಗೆ ನಿಗದಿತ ಬೆಲೆಯಲ್ಲಿ ಒದಗಿಸುವುದು ಸೂಕ್ತ ಎಂದರು.​ ​

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿದ್ದಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಸಾರ್ವಜನಿಕರು ಇಂತಹ ಸುದ್ದಿಗಳಿಂದ ಅನಾವಶ್ಯಕವಾಗಿ ಭಯಭೀತರಾಗುವ ಅಗತ್ಯವಿಲ್ಲ. ಶಂಕಿತರನ್ನು ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಿಗೆ ಕೊರೊನಾ ಸೋಂಕು ಇಲ್ಲವೆಂದು ಖಾತರಿಯಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಹೊರಗೆ ಹೋಗಿ ಬಂದ ನಂತರ ಕೈಗಳನ್ನು ತೊಳೆದುಕೊಳ್ಳುವುದು. ಹೆಚ್ಚು ಜನರು ಸೇರುವ ಸ್ಥಳಗಳಿಗೆ ಹೋಗುವುದನ್ನು ಕಡಿಮೆ ಮಾಡುವುದರಿಂದ ಸೋಂಕು ಬಾರದಂತೆ ತಡೆಗಟ್ಟಬಹುದು ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.