ETV Bharat / state

ವಿವಿಧ ಇಲಾಖೆ ಅಧಿಕಾರಿಗಳಿಗೆ ಸಂಸದ ಪ್ರಜ್ವಲ್‌ ರೇವಣ್ಣ ತರಾಟೆ - ಜಿಲ್ಲಾಧಿಕಾರಿ ಆರ್‌. ಗಿರೀಶ್‌

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳನ್ನು ಸಂಸದ ಪ್ರಜ್ವಲ್‌ ರೇವಣ್ಣ ತರಾಟೆಗೆ ತೆಗೆದುಕೊಂಡರು.

Prajwal Revanna
ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಜ್ವಲ್‌ ರೇವಣ್ಣ
author img

By

Published : Jan 21, 2020, 3:02 PM IST

ಹಾಸನ: ಸಮರ್ಪಕ ಮಾಹಿತಿ ನೀಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್ಎಐ) ಅಧಿಕಾರಿಗಳಿಗೆ ಸಂಸದ ಪ್ರಜ್ವಲ್‌ ರೇವಣ್ಣ ಬೆವರಿಳಿಸಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳನ್ನು ಸಂಸದ ರೇವಣ್ಣ ತರಾಟೆಗೆ ತೆಗೆದುಕೊಂಡರು. ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ 75ರ ದೇವರಾಯಪಟ್ಟಣದಿಂದ ಮಾರನಹಳ್ಳಿವರೆಗೆ ಹೆದ್ದಾರಿ ದುರಸ್ತಿ ಕಾಮಗಾರಿ 8 ಕಿ.ಮೀ.ವರೆಗೂ ನಡೆದಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಅಜಿತ್‌ ಸಭೆ ಗಮನಕ್ಕೆ ತಂದರು.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಜ್ವಲ್‌ ರೇವಣ್ಣ

ಎಂಜಿನಿಯರ್‌ ಉತ್ತರಕ್ಕೆ ತೃಪ್ತರಾಗದ ಸಂಸದರು, ಎನ್‌ಎಚ್ಎಐ ಯೋಜನಾ ನಿರ್ದೇಶಕರು ಸಭೆಗೆ ಏಕೆ ಬಂದಿಲ್ಲ? ಮೂರು ಬಾರಿ ಪತ್ರ ಬರೆಯಲಾಗಿದೆ. ದಿಶಾ ಸಭೆ ನಿತ್ಯ ನಡೆಯುವುದಿಲ್ಲ. ಮೂರು ತಿಂಗಳಿಗೊಮ್ಮೆ ನಡೆಯುವ ಸಭೆಗೆ ಬರುವುದಿಲ್ಲ ಎಂದರೆ ಏನರ್ಥ? ಎಂದು ಕಿಡಿಕಾರಿದರು.

ಇದಕ್ಕೆ ದನಿಗೂಡಿಸಿದ ರೇವಣ್ಣ, ಒಂದು ತಿಂಗಳ ಮುಂಚಿತವಾಗಿ ಸಭೆ ನಡೆಯುವ ಬಗ್ಗೆ ಅಧಿಕಾರಿಗಳಿಗೆ ಪತ್ರ ಕಳುಹಿಸಲಾಗಿದೆ. ಆದರೂ ಗೈರು ಹಾಜರಾಗಿದ್ದಾರೆ’ ಎಂದರು.

436 ಕೋಟಿ ರೂ. ಯೋಜನೆ ವೆಚ್ಚದ ಹಾಸನ–ಬೇಲೂರು ಹಾಗೂ ಬೇಲೂರು–ಚಿಕ್ಕಮಗಳೂರು ರೈಲ್ವೆ ಮಾರ್ಗಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ ಕಾಮಗಾರಿ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು.

ಆಲೂರು ತಾಲ್ಲೂಕು ಕೇಂದ್ರದಲ್ಲಿ ರೈಲು ನಿಲ್ದಾಣವಿದ್ದರೂ ಸಿಬ್ಬಂದಿ ಇಲ್ಲ. ರೈಲುಗಳ ನಿಲುಗಡೆಯೂ ಇಲ್ಲ. ಹಾಗಾಗಿ ಅಲ್ಲಿ ನಿಲ್ದಾಣದ ಏಕೆ ಬೇಕು? ಈ ಬಗ್ಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಬೇಕು ಎಂದು ಆಲೂರು–ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಪಟ್ಟು ಹಿಡಿದರು.

ಈ ಎಲ್ಲ ಸಮಸ್ಯೆಗಳ ಬಗ್ಗೆ ವಿಭಾಗೀಯ ಅಧಿಕಾರಿ ಜತೆ ಸಮಾಲೋಚನೆ ನಡೆಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಪ್ರಜ್ವಲ್‌ ಭರವಸೆ ನೀಡಿ ಚರ್ಚೆಗೆ ತೆರೆ ಎಳೆದರು.

Intro:ಹಾಸನ: ಸಮರ್ಪಕ ಮಾಹಿತಿ ನೀಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್ಎಐ) ಅಧಿಕಾರಿಗಳಿಗೆ ಸಂಸದ ಪ್ರಜ್ವಲ್‌ ರೇವಣ್ಣ ಬೆವರಿಳಿಸಿದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡುವಂತೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ಗೆ ಹೇಳಿದರು.

ರಾಷ್ಟ್ರೀಯ ಹೆದ್ದಾರಿ 75ರ ದೇವರಾ ಯಪಟ್ಟಣದಿಂದ ಮಾರನಹಳ್ಳಿವರೆಗೆ ಹೆದ್ದಾರಿ ದುರಸ್ತಿ ಕಾಮಗಾರಿ 8 ಕಿ.ಮೀ.ವರೆಗೂ ನಡೆದಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಅಜಿತ್‌ ಸಭೆ ಗಮನಕ್ಕೆ ತಂದರು.

ಎಂಜಿನಿಯರ್‌ ಉತ್ತರಕ್ಕೆ ತೃಪ್ತರಾಗದ ಸಂಸದರು, ಎನ್‌ಎಚ್ಎಐ ಯೋಜನಾ ನಿರ್ದೇಶಕರು ಸಭೆಗೆ ಏಕೆ ಬಂದಿಲ್ಲ? ಮೂರು ಬಾರಿ ಪತ್ರ ಬರೆಯಲಾಗಿದೆ. ದಿಶಾ ಸಭೆ ನಿತ್ಯ ನಡೆಯುವುದಿಲ್ಲ. ಮೂರು ತಿಂಗಳಿಗೊಮ್ಮೆ ನಡೆಯುವ ಸಭೆಗೆ ಬರುವುದಿಲ್ಲ ಎಂದರೆ ಏನರ್ಥ ಎಂದು ಕಿಡಿಕಾರಿದರು.

ಇದಕ್ಕೆ ದನಿಗೂಡಿಸಿದ ರೇವಣ್ಣ, ಒಂದು ತಿಂಗಳ ಮುಂಚಿತವಾಗಿ ಸಭೆ ನಡೆಯುವ ಬಗ್ಗೆ ಅಧಿಕಾರಿಗಳಿಗೆ ಪತ್ರ ಕಳುಹಿಸಲಾಗಿದೆ. ಆದರೂ ಗೈರು ಹಾಜರಾಗಿದ್ದಾರೆ’ ಎಂದರು.

436 ಕೋಟಿ ರೂ. ಯೋಜನೆ ವೆಚ್ಚದ ಹಾಸನ–ಬೇಲೂರು ಹಾಗೂ ಬೇಲೂರು–ಚಿಕ್ಕಮಗಳೂರು ರೈಲ್ವೆ ಮಾರ್ಗಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ ಕಾಮಗಾರಿ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದು
ಶಾಸಕ ಎಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು.

ಆಲೂರು ತಾಲ್ಲೂಕು ಕೇಂದ್ರದಲ್ಲಿ ರೈಲು ನಿಲ್ದಾಣವಿದ್ದರೂ ಸಿಬ್ಬಂದಿ ಇಲ್ಲ. ರೈಲುಗಳ ನಿಲುಗಡೆಯೂ ಇಲ್ಲ. ಹಾಗಾಗಿ ಅಲ್ಲಿ ನಿಲ್ದಾಣದ ಏಕೆ ಬೇಕು? ಈ ಬಗ್ಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಬೇಕು ಎಂದು ಆಲೂರು–ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಪಟ್ಟು ಹಿಡಿದರು.

ಈ ಎಲ್ಲ ಸಮಸ್ಯೆಗಳ ಬಗ್ಗೆ ವಿಭಾಗೀಯ ಅಧಿಕಾರಿ ಜತೆ ಸಮಾಲೋಚನೆ ನಡೆಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಪ್ರಜ್ವಲ್‌ ಭರವಸೆ ನೀಡಿ ಚರ್ಚೆಗೆ ತೆರೆ ಎಳೆದರು.

ಬಿಎಸ್ಎನ್‌ಎಲ್‌ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರಾದ ಎ.ಟಿ.ರಾಮಸ್ವಾಮಿ ಮತ್ತು ಶಿವಲಿಂಗೇಗೌಡ,ಅಧಿಕಾರಿಗಳ ಅದಕ್ಷತೆ, ಅಪ್ರಮಾಣಿಕತೆಯಿಂದ ಸಂಸ್ಥೆ ಸುಧಾರಣೆ ಕಾಣದೆ ಮುಚ್ಚುವ ಹಂತ ತಲುಪಿದೆ. ಸಂಪರ್ಕ ಸಿಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ ಎಂದರು.

ಬಿಎಸ್ಎನ್‌ಎಲ್‌ನಲ್ಲಿ 78 ಸಾವಿರ, ಏರ್‌ ಇಂಡಿಯಾದಲ್ಲಿ 48 ಸಾವಿರ ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಸೇವೆಯಿಂದ ನಿವೃತ್ತಿ ಪಡೆಯಲು ಹೇಳುತ್ತಿದೆ. ರೈಲ್ವೆ ಇಲಾಖೆಯೂ ಖಾಸಗೀಕರಣ ಆಗುತ್ತಿದೆ’ ಎಂದು ಪ್ರಜ್ವಲ್‌ ಸಭೆ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ ಅಗತ್ಯವಿರುವ ಕಡೆ ಟವರ್‌ ಅಳವಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ನಗದು ರಹಿತ ವ್ಯವಸ್ಥೆ, ಡಿಜಟಲೀಕರಣ ಮಾಡುತ್ತಿರುವಾಗ ಸಂಪರ್ಕ ಇಲ್ಲದಿದ್ದರೆ ಏನು ಮಾಡಲು ಸಾಧ್ಯವಿಲ್ಲ. ಸಮಸ್ಯೆ ಪರಿಹರಿಸುವಂತೆ ಬಿಎಸ್‌ಎನ್‌ಎಲ್‌ ಅಧಿಕಾರಿಗೆ ಸಂಸದರು ಸೂಚಿಸಿದರು.

ಸಭೆಯಲ್ಲಿ ಜಿ. ಪಂ. ಸಿಇಒ ಬಿ.ಎ.ಪರಮೇಶ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌.ನಂದಿನಿ, ಶಾಸಕರಾದ ಕೆ.ಎಸ್.ಲಿಂಗೇಶ್‌, ಸಿ.ಎನ್‌.ಬಾಲಕೃಷ್ಣ ಇದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.

Body:೦

Conclusion:೦
ETV Bharat Logo

Copyright © 2025 Ushodaya Enterprises Pvt. Ltd., All Rights Reserved.