ಹಾಸನ: ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದರು.
ಅರಕಲಗೋಡು ಪಟ್ಟಣದ ಕ್ರಿಸ್ತಜ್ಯೋತಿ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಠ್ಯ ಚಟುವಟಿಕೆಗಳಿಗೆ ಮಾತ್ರ ಪ್ರಾಮುಖ್ಯತೆ ನೀಡದೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯೆ ರತ್ನಮ್ಮ, ತಾಲೂಕು ಪಂಚಾಯ್ತಿ ಸದಸ್ಯ ಮರೀಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವನಂಜೇಗೌಡ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜೇಗೌಡ ಮತ್ತಿತರರು ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಶಾಲೆಗಳ 2100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.