ETV Bharat / state

ಸಾವಿನ ವಿಚಾರದಲ್ಲಿ ನಾನು ಎಂದಿಗೂ ರಾಜಕೀಯ ಮಾಡುವುದಿಲ್ಲ: ಪ್ರೀತಂ ಗೌಡ - Murder of JDS Municipal member Prashant

ಹಾಸನ ನಗರಸಭೆ ಸದಸ್ಯ ಪ್ರಶಾಂತ್ ಕೊಲೆ ಪ್ರಕರಣದ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡುತ್ತೇನೆ ಎಂದು ಹಾಸನದ ಶಾಸಕ ಪ್ರೀತಂ ಗೌಡ ತಿಳಿಸಿದ್ದಾರೆ.

ಪ್ರೀತಂ ಗೌಡ
ಪ್ರೀತಂ ಗೌಡ
author img

By

Published : Jun 4, 2022, 9:24 AM IST

ಹಾಸನ: ನಗರಸಭೆ ಸದಸ್ಯ ಪ್ರಶಾಂತ್ ಕೊಲೆ ಪ್ರಕರಣ ನಿಜಕ್ಕೂ ದುಃಖದ ಸಂಗತಿ. ಒಬ್ಬ ಜನಪ್ರತಿನಿಧಿಯಾಗಿ ಮತ್ತೊಬ್ಬ ಜನಪ್ರತಿನಿಧಿಯ ಕೊಲೆ ಊಹೆ ಮಾಡಿಕೊಳ್ಳಲು ಕಷ್ಟವಾಗುತ್ತದೆ. ಸದ್ಯದಲ್ಲೇ ಅವರ ಕುಟುಂಬದ ಸದಸ್ಯರನ್ನ ಭೇಟಿ ಮಾಡಿ ಸಾಂತ್ವನ ಹೇಳುತ್ತೇನೆ. ಜೊತೆಗೆ ಪ್ರಕರಣದ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡುತ್ತೇನೆ ಎಂದು ಹಾಸನದ ಶಾಸಕ ಪ್ರೀತಂ ಗೌಡ ಒತ್ತಾಯಿಸಿದರು.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಎಂದಿಗೂ ಸಹ ಸಾವಿನ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನನ್ನ ಮತ್ತು ಪ್ರಶಾಂತ್ ನಡುವೆ ಒಳ್ಳೆಯ ಬಾಂಧವ್ಯವಿತ್ತು. ಅವರ ಸಾವು ನನಗೂ ನೋವು ತಂದಿದೆ. ಅವರ ಬಗ್ಗೆ ಯಾವುದೇ ಪಕ್ಷದಲ್ಲೂ ನೆಗೆಟಿವ್ ಟಾಕ್​ ಇರಲಿಲ್ಲ. ಮೊದಲು ಅವರು ಬೇರೆ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಆ ನಂತರ ಜೆಡಿಎಸ್ ಪಕ್ಷಕ್ಕೆ ಹೋಗಿದ್ದರು. ಯಾರು ಯಾವ ಪಾರ್ಟಿಗಾದರೂ ಹೋಗಬಹುದು. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವುದು ನನ್ನ ಕೆಲಸ ಎಂದು ಪರೋಕ್ಷವಾಗಿ ರೇವಣ್ಣನ ಮಾತಿಗೆ ಪ್ರತ್ಯುತ್ತರ ನೀಡಿದರು.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಪ್ರೀತಂ ಗೌಡ

ಎಲ್ಲ ಕಡೆ ಪೊಲೀಸ್​ ಸೆಕ್ಯೂರಿಟಿ ಕೊಡಲು ಆಗುವುದಿಲ್ಲ. ಗಲಾಟೆ ಆಗಿರುವುದನ್ನ ಬಿಟ್ಟರೆ ಹಾಸನ ಜಿಲ್ಲೆ ಶಾಂತವಾಗಿದೆ. ಈ ಕೊಲೆ ಪ್ರಕರಣವನ್ನು ಪೊಲೀಸ್ ಇಲಾಖೆ ವಿವಿಧ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದು, ಆರೋಪಿಗೆ ತಕ್ಕ ಶಿಕ್ಷೆ ಕೊಡಿಸಲಿದ್ದಾರೆ. ಆ ನಂಬಿಕೆ ನಮಗಿದೆ, ಸರ್ಕಾರಕ್ಕೆ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಾನು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದರು.

ಇದನ್ನೂ ಓದಿ: 2 ತಿಂಗಳಲ್ಲಿ 2 ಸಾವಿರ ಕೋಟಿಗೂ ಅಧಿಕ ಮೊತ್ತದ ಆಸ್ತಿ ತೆರಿಗೆ ಸಂಗ್ರಹ: ಬಿಬಿಎಂಪಿಯಿಂದ ಭರ್ಜರಿ ಬೇಟೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.