ETV Bharat / state

ಬೇರೆ ಕ್ಷೇತ್ರದಲ್ಲಿ ಮಂತ್ರಕ್ಕೆ ಮಾವಿನಕಾಯಿ ಉದುರಲ್ಲ: ಟೀಕಾಕಾರರಿಗೆ ಪ್ರೀತಂ ಗೌಡ ತಿರುಗೇಟು

ನಮ್ಮ ಮುಖಂಡರು ನನ್ನನ್ನು ಹಾಸನದ ಮುಖ್ಯಮಂತ್ರಿ ರೀತಿ ನೋಡಿಕೊಳ್ಳುತ್ತಿದ್ದಾರೆ. ಹೇಳಿದ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡುತ್ತಿದ್ದಾರೆ. ಇದಕ್ಕಿಂತ ಇನ್ನೇನೂ ನಿರೀಕ್ಷೆ ಮಾಡಲ್ಲ. ನನಗೆ ಅಧಿಕಾರ ಕೊಡುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಹೇಳುವ ಮೂಲಕ ಪರೋಕ್ಷವಾಗಿ ತವೂ ಒಬ್ಬರು ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ಪ್ರೀತಂ ಗೌಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Preetham Gowda reaction about Prajwal Revanna allegations
ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಶಾಸಕ ಪ್ರೀತಂಗೌಡ
author img

By

Published : Nov 12, 2020, 10:34 PM IST

Updated : Nov 12, 2020, 10:47 PM IST

ಹಾಸನ: ಶಿರಾ ಉಪ ಚುನಾವಣೆ ಹೋರಾಟ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ನೇತೃತ್ವ ಸೇರಿದಂತೆ ಹಲವರ ಒಗ್ಗಟ್ಟಿನ ಫಲ ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದ್ದಾರೆ.

ಹಾಸನಾಂಬೆ ದರ್ಶನ ಮುಗಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ನಾಯಕರೆಲ್ಲ ಬಂದು ಶಿರಾ ನಮ್ಮದೇ ಕ್ಷೇತ್ರ ಎಂದು ಪ್ರಚಾರ ಮಾಡಿದ್ರು. ಆದರೆ ಪ್ರೀತಂ ಗೌಡ ಕ್ಷೇತ್ರದ ಅಭಿವೃದ್ಧಿ ಬಿಟ್ಟು ಶಿರಾದಲ್ಲಿ ಕುಳಿತಿದ್ದಾರೆ ಎಂದು ಟೀಕೆ ಮಾಡಿದ್ರು. ಮಾರನೇ ದಿನವೇ ಈ ರೀತಿ ಹೇಳಿಕೆ ನೀಡಿದವರೆಲ್ಲ ಬಂದು ಶಿರಾದಲ್ಲೇ ಕುಳಿತಿದ್ರು. ಅದರಲ್ಲೇ ಅವರ ದ್ವಂದ್ವ ನೀತಿ ಏನೆಂದು ತಿಳಿಯಲಿದೆ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.

ಪಾಪ ನಮ್ಮ ಯುವ ನಾಯಕರು ಯಾವ ಹೋಬಳಿ ಜವಾಬ್ದಾರಿ ತಗೊಂಡಿದ್ರೋ ಅದರಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಮುಂಬರುವ ದಿನಗಳಲ್ಲಿ ರಾಜಕಾರಣದಲ್ಲಿ ಹೆಚ್ಚು ಶಕ್ತಿ ಬೆಳೆಸಿಕೊಳ್ಳುವ ಬುದ್ಧಿ ಆ ದೇವರು ಕೊಡಲಿ. ತಾತನ‌ ಹೆಸರೇಳಿಕೊಂಡು ಲೋಕಸಭಾ ಸದಸ್ಯರಾಗಿದ್ದಾರೆ. ಆದರೆ ಬೇರೆ ಕ್ಷೇತ್ರದಲ್ಲಿ ಮಂತ್ರಕ್ಕೆ ಮಾವಿನಕಾಯಿ ಉದುರಲ್ಲ ಅನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ಕಥೆ ಹೇಳಿದ್ರೆ ಜನ ವೋಟು ಹಾಕಲ್ಲ. ಇವರಿಗೆ ವೋಟು ಹಾಕಿ ಬೇಸರವಾಗಿ ಜನ ನಂಬಿಕಸ್ಥರನ್ನು ಹುಡುಕುತ್ತಿದ್ದರು ಎಂದು ಜೆಡಿಎಸ್ ಯುವ​ ಮುಖಂಡ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಮೇಲೆ ನಂಬಿಕೆ ಬಂದು ಗೆಲ್ಲಿಸಿದ್ದಾರೆ. ನಮ್ಮ ಮುಖಂಡರು ನನ್ನನ್ನು ಹಾಸನದ ಮುಖ್ಯಮಂತ್ರಿ ರೀತಿ ನೋಡಿಕೊಳ್ಳುತ್ತಿದ್ದಾರೆ. ಹೇಳಿದ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡುತ್ತಿದ್ದಾರೆ. ಇದಕ್ಕಿಂತ ಇನ್ನೇನೂ ನಿರೀಕ್ಷೆ ಮಾಡಲ್ಲ. ನನಗೆ ಅಧಿಕಾರ ಕೊಡುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಹೇಳುವ ಮೂಲಕ ಪರೋಕ್ಷವಾಗಿ ತವೂ ಒಬ್ಬರು ಸಚಿವ ಸ್ಥಾನದ ಆಕಾಂಕ್ಷಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜಕೀಯವಾಗಿ ಭಿನ್ನಾಭಿಪ್ರಾಯ ಇದ್ದರೂ ಎಂಪಿ ಅವರ ಮೇಲೆ ನನ್ನ ಕಾಳಜಿ ಇದೆ. ಹಾಗಾಗಿ ಸಂಸದರು ಯಾವುದೇ ಗುಂಡಿ ಇರುವ ರಸ್ತೆಯಲ್ಲಿ ಓಡಾಡಬಾರದು ಎಂದು ಮೊದಲು ಅವರ ಮನೆ ಮುಂದೆ ಇದ್ದ ಗುಂಡಿ ಮುಚ್ಚಿಸಿದ್ದೇವೆ ಎಂದು ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಶಾಸಕ ಪ್ರೀತಂಗೌಡ

ಚೆನ್ನಾಗಿರುವ ರಸ್ತೆಯನ್ನು ಒಡೆದು ಕೆಲಸ ಮಾಡಿಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲಾಗುವುದು. ಅವರ ಮನೆಯ ಮುಂದಿನ ರಸ್ತೆ ಸರಿಯಾದರೆ ಅವರು ಖುಷಿಪಡಬೇಕು. ಇದರಲ್ಲಿ ಆತಂಕ ಪಡುವಂಥದ್ದು ಏನಿದೆ ಎಂದು ಪ್ರಶ್ನೆ ಮಾಡಿದರು.

Last Updated : Nov 12, 2020, 10:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.