ಹಾಸನ: ಕೋವಿಡ್ ಭೀತಿಯ ನಡುವೆ ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸುರಕ್ಷತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಹೇಳಿದ್ದಾರೆ.
ನಗರದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ವಿತರಣೆ ಹಾಗೂ ಸಾಮಾಜಿಕ ಅಂತರ ಪಾಲನೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 16,808 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಲಾಕ್‌ಡೌನ್ ಹಿನ್ನೆಲೆ ಬೇರೆ ಜಿಲ್ಲೆಗಳಿಗೆ ತೆರೆಳಿದ್ದ 120 ವಿದ್ಯಾರ್ಥಿಗಳು ತಮ್ಮ ಗ್ರಾಮದ ಸಮೀಪದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಅದೇ ರೀತಿ ಬೇರೆ ಜಿಲ್ಲೆಯ ಒಟ್ಟು 900 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.