ETV Bharat / state

ಚನ್ನರಾಯಪಟ್ಟಣದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ರಕ್ತದಾನ

ಚನ್ನರಾಯಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಯಿತು.

author img

By

Published : Jul 1, 2020, 3:17 PM IST

Press day celebration
ಚನ್ನರಾಯಪಟ್ಟಣದಲ್ಲಿ ಪತ್ರಿಕಾ ದಿನಾಚರಣೆ: ಶಾಸಕ ಸಿ.ಎನ್ ಬಾಲಕೃಷ್ಣ ಚಾಲನೆ

ಚನ್ನರಾಯಪಟ್ಟಣ: ಪತ್ರಿಕಾ ದಿನಾಚರಣೆ ಅಂಗವಾಗಿ ಚನ್ನರಾಯಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಚಾಲನೆ ನೀಡಿದರು.

ಚನ್ನರಾಯಪಟ್ಟಣದಲ್ಲಿ ಪತ್ರಿಕಾ ದಿನಾಚರಣೆ: ಶಾಸಕ ಸಿ.ಎನ್.ಬಾಲಕೃಷ್ಣ ಚಾಲನೆ

ಪತ್ರಕರ್ತರ ದಿನಾಚರಣೆ ಅಂಗವಾಗಿ ರಕ್ತದಾನ ಮಾಡುವ ಮೂಲಕ ವಿನೂತನವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಮಹತ್ವದ ಸುಮಾರು 20 ಹಿಂದಿನ ಪತ್ರಿಕೆಗಳನ್ನು ಪ್ರದರ್ಶನಕ್ಕೆ ಇಡಲಾಯಿತು. ಸ್ವಯಂ ಪ್ರೇರಿತರಾಗಿ ಸಂಘ ಸಂಸ್ಥೆಗಳ ಜನರು ಬಂದು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು.

ಈ ವೇಳೆ ಶಾಸಕ ಸಿ.ಎನ್ ಬಾಲಕೃಷ್ಣ ಮಾತನಾಡಿ, ಪತ್ರಕರ್ತರು ದೇಶದ ಪ್ರಜಾಪ್ರಭುತ್ವದ 4ನೇ ಅಂಗ. ಸಮಾಜದ ಅಂಕು-ಡೊಂಕುಗಳನ್ನು ಎತ್ತಿ ತೋರಿಸುವ ಕೆಲಸ ಸಾಮಾನ್ಯವಲ್ಲ. ಪತ್ರಕರ್ತರು ಬಹಳ ನಿಷ್ಠೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಚನ್ನರಾಯಪಟ್ಟಣದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜಣ್ಣ, ಪತ್ರಕರ್ತ ಕ್ಷೇಮಾಭಿವೃದ್ಧಿ ಸಂಘಕ್ಕೆ 25 ಸಾವಿರ ರೂ. ಚೆಕ್ ಅ​ನ್ನು ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 50 ಜನರು ರಕ್ತದಾನ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.