ETV Bharat / state

ಪ್ರಧಾನಿ ಮೋದಿ ಹುಟ್ಟುಹಬ್ಬ.. ಹಾಸನ ಜಿಲ್ಲೆಯಾದ್ಯಂತ ಸಂಭ್ರಮಾಚರಣೆ.. - ಶಾಸಕ ಪ್ರೀತಂ ಜೆ. ಗೌಡ

ಪ್ರಧಾನಿ ನರೇಂದ್ರ ಮೋದಿ ಅವರ 69ನೇ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರು ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಣೆ ಮಾಡಿದರು.

Hassan district
author img

By

Published : Sep 18, 2019, 8:37 AM IST

ಹಾಸನ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ 69ನೇ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರು ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಣೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ನಗರಕ್ಕೆ ಆಗಮಿಸಿದ್ದ ಶಾಸಕ ಪ್ರೀತಂ ಜೆ. ಗೌಡ ಅವರು ಮೊದಲಿಗೆ ನಗರದ ಆರ್​ಸಿ ರಸ್ತೆಯಲ್ಲಿರುವ ಎನ್​ಸಿಸಿ ಕಚೇರಿ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಬಿಜೆಪಿ ವತಿಯಿಂದ ಬಟ್ಟೆ ಬ್ಯಾಗ್ ವಿತರಣೆ ಮಾಡಿದರು.

ಜಿಲ್ಲೆಯಾದ್ಯಂತ ಮೋದಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಕಾರ್ಯಕರ್ತರು..

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಬಿಜೆಪಿ ಕಾರ್ಯಕರ್ತರು ತೀರ್ಮಾನಿಸಿದ್ದಾರೆ. ಮಂಗಳವಾರ ಸಂತೆ ದಿನವಾಗಿದ್ದರಿಂದ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಮಾಹಿತಿ ನೀಡಿ ಪ್ಲಾಸ್ಟಿಕ್ ಕವರ್​ಗಳನ್ನು ಪಡೆದು ಬಟ್ಟೆ ಬ್ಯಾಗ್ ಕೊಡುವ ಕಾರ್ಯಕ್ರಮ ಹಮ್ಮಿಕೊಂಡು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಸಂಕಲ್ಪ ಮಾಡಲು ಪ್ರಾರಂಭಿಸಿದ್ದೇವೆ. ಇದಕ್ಕೆ ಅನೇಕ ಸಂಘ-ಸಂಸ್ಥೆಗಳು‌ ನಮ್ಮೊಂದಿಗೆ ಕೈಜೋಡಿಸಿದ್ದು, ಸಕಾರಾತ್ಮಕ ಹಾಗೂ ರಚನಾತ್ಮಕವಾಗಿ ಕಾರ್ಯ ಯಶಸ್ವಿಗೊಳಿಸಲು ಮುಂದಿನ ದಿನಗಳಲ್ಲಿ ಶ್ರಮಿಸುವುದಾಗಿ ತಿಳಿಸಿದರು.

ಕೇಕ್​ ಕತ್ತರಿಸಿ ಸಂಭ್ರಮಾಚರಣೆ:
ನಗರದ ಮಹಾರಾಜ ಉದ್ಯಾನವನ ಬಳಿ ಕಾರ್ ನಿಲ್ದಾಣದಲ್ಲಿ ಕ್ಷೇತ್ರದ ಶಾಸಕರು ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ನಂತರ ಸಾರ್ವಜನಿಕರಿಗೆ ಚಹ ವಿತರಣೆ ಮಾಡಿದರು. ತಾಲೂಕಿನ ಹೂವನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿನ ಆವರಣದಲ್ಲಿ ಗಿಡ ನೆಡುವುದರ ಮೂಲಕ ಮೊದಲು ಚಾಲನೆ ನೀಡಿದರು.

ರೈಲ್ವೆ ಮೇಲ್ಸೆತುವೆ ಆದಷ್ಟು ಬೇಗ ಪೂರ್ಣಗೊಳ್ಳಲಿದೆ:
ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೆ ಸೇತುವೆ ನಿರ್ಮಾಣ ಕಾರ್ಯವನ್ನು ವೀಕ್ಷಿಸಿ ಮಾತನಾಡಿದ ಅವರು, ರೈಲ್ವೆ ಸೇತುವೆ ನಿರ್ಮಾಣಕ್ಕೆ 24 ತಿಂಗಳ ಅವಧಿಯನ್ನು ಗುತ್ತಿಗೆದಾರರಿಗೆ ನೀಡಲಾಗಿತ್ತು. ಸದ್ಯ 15 ತಿಂಗಳು ಮುಗಿದಿದ್ದು, 9 ತಿಂಗಳಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಜನತೆ ನಿರಾಳತೆಯಿಂದ ಓಡಾಡಲು ಅನುವು ಮಾಡಿಕೊಡಲಾಗುವುದು. ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸದ್ಯ ವಿದ್ಯುತ್ ಸಮಸ್ಯೆ ಎದುರಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಸರ್ಕಾರಿ ಕೆಲಸಗಳು ಆಗಬೇಕಾದರೆ ಸ್ವಲ್ಪ ತಡವಾಗುತ್ತೆ. ಸಾರ್ವಜನಿಕರಿಗೆ ಸ್ವಲ್ಪ ದಿನಗಳು ತೊಂದರೆಯಾಗುತ್ತದೆ. ಆದರೆ, ಅದಕ್ಕೆ ತಾವುಗಳು ಸಹಕಾರ ಕೊಡಬೇಕು ಅಂತಾ ಮನವಿ ಮಾಡಿದರು.

ರೈಲ್ವೆ ಮೇಲ್ಸೇತುವೆ ನಿರ್ಮಾಣವಾಗಬೇಕಾದರೆ ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಹಾಗೂ ಎನ್ ಆರ್ ವೃತ್ತವನ್ನ ಸಂಪರ್ಕಿಸುವ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಅವರಿಗೆ ಬಿಟ್ಟು ಕೊಡಬೇಕಾಗುತ್ತದೆ. ಆಗ ಮಾತ್ರ ಕೆಲಸಗಳು ರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ರಾಜಘಟ್ಟ ಮತ್ತು ನ್ಯಾಯಾಧೀಶರ ವಸತಿ ಪಕ್ಕದಲ್ಲಿರುವ ರಸ್ತೆಯನ್ನು ಸಾರ್ವಜನಿಕರಿಗೆ ಮತ್ತು ವಾಹನಗಳಿಗೆ ಮುಕ್ತಗೊಳಿಸಿ ಎರಡೂ ರಸ್ತೆಯನ್ನು ಕಾಮಗಾರಿ ಮುಗಿಯುವ ತನಕ ನಿಷೇಧಿಸಿ ಪರ್ಯಾಯ ರಸ್ತೆಯನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪುನೀತ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ನಗರಾಧ್ಯಕ್ಷ ಶೋಭನ್ ಬಾಬು, ಮುಖಂಡರಾದ ಶ್ರೀನಿವಾಸ್, ರಘು ಇತರರು ಪಾಲ್ಗೊಂಡಿದ್ದರು.

Intro:ಹಾಸನ : ರಾಜ್ಯದ ಜನ ಮೆಚ್ಚಿದ ನಾಯಕ ಎಂದೇ ಹೆಸರುವಾಸಿಯಾಗಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಆಚರಣೆಯ ಪ್ರಯುಕ್ತ ನಗರದ ಆರ್ ಸಿ ರಸ್ತೆಯಲ್ಲಿರುವ ಎನ್ ಸಿ ಸಿ ಕಚೇರಿ ಮುಂಭಾಗ ಭಾರತಾಂಬೆಗೆ ಘೋಷಣೆ ಕೂಗುತ್ತಾ, ಮೋದಿಗೆ ಜೈಕಾರ ಹಾಕುತ್ತಾ ಹಾಸನ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಬಿಜೆಪಿ ವತಿಯಿಂದ ಬಟ್ಟೆ ಬ್ಯಾಗ್ ವಿತರಣೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ಮೋದಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಬಿಜೆಪಿ ಕಾರ್ಯಕರ್ತರು ತೀರ್ಮಾನಿಸಿದ್ದು, ಮಂಗಳವಾರ ಸಂತೆ ದಿನವಾಗಿದ್ದರಿಂದ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಮಾಹಿತಿ ನೀಡಿ ಪ್ಲಾಸ್ಟಿಕ್ ಕವರ್ ಗಳನ್ನು ಪಡೆದು ಬಟ್ಟೆ ಬ್ಯಾಗ್ ಕೊಡುವ ಕಾರ್ಯಕ್ರಮ ಹಮ್ಮಿಕೊಂಡು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡಲು ಸಂಕಲ್ಪ ಮಾಡಲು ಪ್ರಾರಂಭಿಸಿದ್ದೇವೆ ಎಂದರು.

ಅನೇಕ ಸಂಘ-ಸಂಸ್ಥೆಗಳು‌ ನಮ್ಮೊಂದಿಗೆ ಕೈಜೋಡಿಸಿರುವುದರಿಂದ ಸಕಾರಾತ್ಮಕ ಹಾಗೂ ರಚನಾತ್ಮಕವಾಗಿ ಕಾರ್ಯ ಯಶಸ್ವಿಗೊಳಿಸಲು ಮುಂದಿನ ದಿನಗಳಲ್ಲಿ ಶ್ರಮಿಸುವುದಾಗಿ ತಿಳಿಸಿದರು.

ಬೈಟ್ 1 : ಪ್ರೀತಂ ಜೆ.ಗೌಡ, ಹಾಸನ ಕ್ಷೇತ್ರ ಶಾಸಕ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.

Body:0

Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.