ETV Bharat / state

ಖಾಸಗಿ ಆಸ್ಪತ್ರೆಗಳನ್ನು ಜಿಲ್ಲಾಡಳಿತದ ನಿಯಂತ್ರಣಕ್ಕೆ ನೀಡಿ: ಶಾಸಕ ಪ್ರೀತಂ ಗೌಡ - ಹಾಸನ ಕೊರೊನಾ ಖಾಸಗಿ ಆಸ್ಪತ್ರೆಗಳು

ಜಿಲ್ಲೆಯಲ್ಲಿ ಒಂದೆರಡು ಆಸ್ಪತ್ರೆಯನ್ನು ಹೊರತುಪಡಿಸಿ, ಉಳಿದ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಕೊರೊನಾ ನಿಯಂತ್ರಣ ಮಾಡಲು ಮೀಸಲಿರಿಸಬೇಕು. ಯಾವುದಾದರೂ ಖಾಸಗಿ ಆಸ್ಪತ್ರೆ ಕೊರೊನಾಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದರೆ ಅಂತಹ ಆಸ್ಪತ್ರೆಯ ಪರವಾನಿಗೆ ರದ್ದುಪಡಿಸಬೇಕು ಎಂದು ಶಾಸಕ ಪ್ರೀತಂ ಗೌಡ ಹೇಳಿದ್ದಾರೆ.

Preetam Gowda
ಶಾಸಕ ಪ್ರೀತಂ ಗೌಡ
author img

By

Published : Jul 23, 2020, 7:01 PM IST

ಹಾಸನ: ಖಾಸಗಿ ಆಸ್ಪತ್ರೆಯವರು ದುಡ್ಡು ಮಾಡುತ್ತಿರುವುದು ಸಾಕು, ಅವರು ಹೇಳುವ ಕಥೆಯನ್ನು ಕೇಳುವುದು ಬಿಟ್ಟು ಕೊರೊನಾ ನಿಯಂತ್ರಣಕ್ಕಾಗಿ ಅವುಗಳನ್ನು ಜಿಲ್ಲಾಡಳಿತದ ನಿಯಂತ್ರಣಕ್ಕೆ ಸರ್ಕಾರ ನೀಡಲಿ ಎಂದು ಬಿಜೆಪಿ ಶಾಸಕ ಪ್ರೀತಮ್ ಗೌಡ ಒತ್ತಾಯಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಉಸ್ತುವಾರಿ ಸಚಿವ ಗೋಪಾಲಯ್ಯ ಅಧ್ಯಕ್ಷತೆಯ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವುದಿಲ್ಲವೋ ಅಂತಹ ಆಸ್ಪತ್ರೆಗಳ ಲೈಸೆನ್ಸ್ ರದ್ದುಗೊಳಿಸುವಂತೆ ಆಗ್ರಹಿಸಿದರು.

ಶಾಸಕ ಪ್ರೀತಂ ಗೌಡ

ಖಾಸಗಿ ಆಸ್ಪತ್ರೆಗಳ ಬಗ್ಗೆ ಮುಲಾಜಿಲ್ಲದೆ, ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಶ್ರೀಮಂತರು ಬೇಕಾದರೆ ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಹೋಗಲಿ. ಆದರೆ, ಬಡವರಿಗೆ ಸರ್ಕಾರಿ ಆಸ್ಪತ್ರೆ ಮೀಸಲಿರಿಸಬೇಕು. ಇದನ್ನು ಜಿಲ್ಲೆಯ ಜನರ ರಕ್ಷಣೆ ದೃಷ್ಟಿಯಿಂದ ಹೇಳುತ್ತಿದ್ದೇನೆ ಎಂದರು.

ಖಾಸಗಿ ಆಸ್ಪತ್ರೆಗಳ ಕಥೆ ಕೇಳಲು ಸರ್ಕಾರ ತಯಾರಿಲ್ಲ, ಜಿಲ್ಲೆಯಲ್ಲಿನ ಒಂದೆರಡು ಖಾಸಗಿ ಆಸ್ಪತ್ರೆಗಳನ್ನು ಅಪಘಾತ ಮತ್ತಿತರ ಚಿಕಿತ್ಸೆಗೆ ಮೀಸಲಿರಿಸಿ ಉಳಿದವುಗಳನ್ನು ವಶಕ್ಕೆ ಪಡೆದು ಕೊರೊನಾ ಚಿಕಿತ್ಸೆಗೆ ಮೀಸಲಿಡಬೇಕೆಂದು ಜಿಲ್ಲಾಡಳಿತಕ್ಕೆ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.