ETV Bharat / state

ಖಾಸಗಿ ಶಾಲೆಗಳ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹ

ಇಡೀ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗಿಂತ 2 ಪಟ್ಟು ಹೆಚ್ಚಾಗಿ ಖಾಸಗಿ ಶಾಲೆಗಳು ಇದ್ದು, ಇದರಲ್ಲಿ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಅನುದಾನವನ್ನು ನೀಡುತ್ತಿದೆ. ಬಹುತೇಕ ಖಾಸಗಿ ಸಂಸ್ಥೆಗಳು ಅನುದಾನ ರಹಿತವಾಗಿ ಕೆಲಸವನ್ನೂ ನಿರ್ವಹಿಸುತ್ತಿವೆ.

author img

By

Published : Jun 25, 2020, 7:46 PM IST

ಹಾಸನ: ಕೊರೊನಾ ಹಿನ್ನೆಲೆಯಲ್ಲಿ ಕಷ್ಟದಲ್ಲಿರುವ ಇತರೆ ವರ್ಗದವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ನೀಡಿರುವಂತೆ ಖಾಸಗಿ ಶಾಲೆಗಳ ಸಿಬ್ಬಂದಿ ವರ್ಗದವರಿಗೂ ನೀಡಬೇಕು ಎಂದು ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಕಾನೂನು ಸಲಹೆಗಾರ ಹೆಚ್.ಕೆ.ಜವರೇಗೌಡ ಒತ್ತಾಯಿಸಿದರು.​

ಖಾಸಗಿ ಶಾಲೆಗಳ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹ

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೋಷಕರಿಂದ ಶಾಲಾ ಶುಲ್ಕ ವಸೂಲಾತಿ ಮಾಡಬಾರದೆಂದು ಆದೇಶಿಸಿರುವ ರಾಜ್ಯ ಸರ್ಕಾರ, ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸದೆ 6ನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ನೀಡಬೇಕೆಂದು ಆದೇಶಿಸಿದೆ. ಇಡೀ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗಿಂತ 2 ಪಟ್ಟು ಹೆಚ್ಚಾಗಿ ಖಾಸಗಿ ಶಾಲೆಗಳು ಇದ್ದು, ಇದರಲ್ಲಿ ಕೆಲವು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಅನುದಾನ ನೀಡುತ್ತಿದೆ. ಬಹುತೇಕ ಖಾಸಗಿ ಸಂಸ್ಥೆಗಳು ಅನುದಾನ ರಹಿತವಾಗಿ ಕೆಲಸ ನಿರ್ವಹಿಸುತ್ತಿವೆ ಎಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ವೇತನ ಮತ್ತು ಸೌಲಭ್ಯಗಳನ್ನು ನೀಡಬೇಕು. ಇಲ್ಲದಿದ್ದರೆ ಪೋಷಕರಿಂದ ಹೆಚ್ಚಿನ ಶಾಲಾ ಶುಲ್ಕ ಪಡೆಯಬೇಕಾಗುತ್ತದೆ. ಇದಕ್ಕೆ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿಯನ್ನು ನೀಡಿದಂತಾಗುತ್ತದೆ ಎಂದು ಎಚ್ಚರಿಸಿದರು.​

ಪ್ರಸಕ್ತ ಸಾಲಿನಲ್ಲಿ ಶಾಲೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾದ ಮಾಹಿತಿ ನೀಡಿಲ್ಲ. ಪರಿಸ್ಥಿತಿ ಹೀಗಿದ್ದರೂ ಸಹ ಪಠ್ಯ ಪುಸ್ತಕ ಪಡೆದುಕೊಳ್ಳಲು ಶಿಕ್ಷಣ ಇಲಾಖೆಗೆ ಹಣ ಸಂದಾಯ ಮಾಡುವಂತೆ ಒತ್ತಾಯ ಪಡಿಸುತ್ತಿರುವುದು ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಆದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಬೇಕೆಂದು ಆಗ್ರಹಿಸಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.