ETV Bharat / state

ಸರ್ಕಾರದ ನಿರ್ದೇಶನದಂತೆ ಖಾಸಗಿ ಶಾಲೆಗಳು ಪೋಷಕರಿಂದ ಶುಲ್ಕ ಪಡೆಯಬೇಕು: ಗೋಪಾಲಯ್ಯ ಎಚ್ಚರಿಕೆ - ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ

ಇಂದು ಕೊರೊನಾ ಸಂದರ್ಭದಲ್ಲಿ ಶಾಲಾ ಮಕ್ಕಳ ಪೋಷಕರು ಸೇರಿ ಪ್ರತಿಯೊಬ್ಬರು ತಮ್ಮ ಜೀವನ ನಡೆಸುವುದೇ ಕಷ್ಟವಾಗಿದೆ. ಶಾಲಾ ಮಕ್ಕಳಿಗೆ ಯಾವ ತಾರತಮ್ಯವಾಗದಂತೆ ಮತ್ತು ತೊಂದರೆಯಾಗದಂತೆ ಸರ್ಕಾರದ ನಿರ್ದೇಶನದಂತೆ ನಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದರು.

K Gopalaiah
ಕೆ. ಗೋಪಾಲಯ್ಯ
author img

By

Published : Aug 15, 2020, 5:35 PM IST

ಹಾಸನ: ಸರ್ಕಾರದ ನಿರ್ದೇಶನದಂತೆ ಖಾಸಗಿ ಶಾಲೆಗಳು ಪೋಷಕರಿಂದ ಶುಲ್ಕ ಪಡೆಯಬೇಕು. ಏನಾದರೂ ನಿಯಮ ಮೀರಿ ಶುಲ್ಕ ಪಡೆದರೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಸರಿಪಡಿಸಿಕೊಳ್ಳುವಂತೆ ಪೋಷಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಖಡಕ್ ಎಚ್ಚರಿಕೆ ನೀಡಿದರು.

ಸರ್ಕಾರದ ನಿರ್ದೇಶನದಂತೆ ಖಾಸಗಿ ಶಾಲೆಗಳು ಪೋಷಕರಿಂದ ಶುಲ್ಕ ಪಡೆಯಬೇಕು: ಕೆ.ಗೋಪಾಲಯ್ಯ ಎಚ್ಚರಿಕೆ

​ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಮಾಸಿಕ ಶುಲ್ಕವನ್ನು ಆಯಾ ತಿಂಗಳಲ್ಲಿ ಹಿಂದೆ ನೀಡಲಾಗುತಿತ್ತು. ಆದರೆ ಈಗ ಎರಡು ಕಂತುಗಳಲ್ಲಿ ನೀಡಬೇಕು ಎಂಬುದರ ಬಗ್ಗೆ ಪೋಷಕರು ಗೊಂದಲದಲ್ಲಿ ಇದ್ದು, ಈ ಬಗ್ಗೆ ತಿಳಿಸುವಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರ ನಿಗದಿ ಮಾಡಿರುವ ಹಾಗೆ ಖಾಸಗಿ ಶಾಲೆಗಳು ಅನುಸರಿಸಬೇಕು. ಏನಾದರೂ ನಿಯಮ ಮೀರಿ ಹೆಚ್ಚಿನ ಹಣ ಪಡೆಯುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೆ ಸರಿಪಡಿಸುವ ಕೆಲಸ ಮಾಡಲಿದ್ದಾರೆ ಎಂದರು.

ಮಳೆಯಿಂದ ಹಾನಿಯಾಗಿರುವ ಬಗ್ಗೆ ಈಗಾಗಲೇ ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು, ಅರಕಲಗೂಡು ಭಾಗಕ್ಕೆ ಭೇಟಿ ಕೊಟ್ಟಾಗ ಅಲ್ಲಿನ ಜನಪ್ರತಿನಿಧಿಗಳು ಮನವಿ ಮಾಡಿದ್ದು, ಈ ಬಗ್ಗೆ ಸ್ಪಂದಿಸುವುದಾಗಿ ಹೇಳಿದರು.

​ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಿನ್ನೆ ಕಾಯ್ದೆ ಬಗ್ಗೆ ನಡೆಸಿದ ಪ್ರತಿಭಟನೆ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಏನು ಮನವಿ ಮಾಡಿದ್ದಾರೆ. ಅದು ನಮಗೆ ತಲುಪಿದ್ದು, ಸರ್ಕಾರ ಗಮನಿಸಲಿದೆ ಎಂದು ಭರವಸೆ ನೀಡಿದರು.

ಕೊರೊನಾ ನಿಭಾಯಿಸುವಲ್ಲಿ ಸರ್ಕಾರ ಬದ್ಧವಾಗಿದ್ದು, ಜೊತೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರದಿಂದ ಏನೇನು ಆಗಬೇಕು ಮತ್ತು ನನೆಗುದಿಗೆ ಬಿದ್ದಿರುವ ಕೆಲಸವನ್ನು ಯಡಿಯೂರಪ್ಪ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಯಾವ ಕಾರಣಕ್ಕೂ ತಾರತಮ್ಯ ಮಾಡುವುದಿಲ್ಲ ಎಂದರು.

​ಕಿರಣ್ ಕುಮಾರ್ ಸಾವಿನ ಬಗ್ಗೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಚಿವರು, ಮುಖ್ಯಮಂತ್ರಿಗಳು ಅಲ್ಲಿನ ಘಟನೆ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ವರದಿ ಪಡೆಯಲಾಗುತ್ತಿದೆ. ಸಂಪೂರ್ಣ ವರದಿ ಪಡೆದ ನಂತರ ಸಂದರ್ಭಕ್ಕೆ ತಕ್ಕಂತೆ ಯಾವ ನ್ಯಾಯಾಂಗ ತನಿಖೆಗೆ ಕೊಡಬಹುದು ಎಂಬ ಬಗ್ಗೆ ಕುಳಿತು ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ತಕ್ಷಣವೇ ತನಿಖೆ ಮಾಡಬೇಕು ಎಂದು ಹೇಳುವವರಲ್ಲಿ ನಾನೂ ಒಬ್ಬನಾಗಿದ್ದೇನೆ. ಕಿರಣ್ ಕುಮಾರ್ ಒಬ್ಬ ಉತ್ತಮ ಅಧಿಕಾರಿಯಾಗಿದ್ದು, ನಮಗೂ ಮತ್ತು ಸರ್ಕಾರಕ್ಕೂ ಅನುಕಂಪವಿದೆ. ನಿಷ್ಪಕ್ಷಪಾತವಾಗಿ ತನಿಖೆ ಮಾಡಿಸಲು ನಾವೆಲ್ಲಾ ಸಹಕಾರ ಕೊಡಬೇಕು ಎಂದು ಹೇಳಿದರು.​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.