ಹಾಸನ: ಅಯೋಧ್ಯೆಯಲ್ಲಿ ಇಂದು ರಾಮಮಂದಿರ ನಿರ್ಮಾಣದ ಭೂಮಿ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ನಿಷೇಧಾಜ್ಞಎ ಜಾರಿ ಮಾಡಲಾಗಿದೆ.
ಅಹಿತಕರ ಘಟನೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಆ.5ರ ಮಧ್ಯರಾತ್ರಿಯಿಂದ ಆ. 6ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಾಂತ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶಿಸಿದ್ದಾರೆ.
ನಾಲ್ಕಕ್ಕಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವಂತಿಲ್ಲ. ಆಯುಧ, ಶಸ್ತ್ರಾಸ್ತ್ರ ಮತ್ತು ಮಾರಕಾಸ್ತ್ರಗಳನ್ನು ಹೊತ್ತು ತಿರುಗುವುದು ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ವೇಳೆ ಯಾವುದೇ ಮೆರವಣಿಗೆ, ವಿಜಯೋತ್ಸವ ಮತ್ತು ಕರಾಳ ದಿನಾಚರಣೆ ನಡೆಸಿವಂತಿಲ್ಲ. ಪಟಾಕಿ ಸಹ ಸಿಡಿಸುವಂತಿಲ್ಲ ಎಂದು ಸೂಚಿಸಲಾಗಿದೆ.
ಯಾವುದೇ ರೀತಿಯ ಬಂದ್, ಪ್ರತಿಭಟನೆ, ಪ್ರತಿಕೃತಿ ದಹನ, ಪ್ರದರ್ಶನ ಹಾಗೂ ಪೂರಕ ಚಟುವಟಿಕೆಗಳನ್ನು ಸಹ ನಿಷೇಧಿಸಿದೆ. ಸರ್ಕಾರಿ ಸಂಸ್ಥೆ, ಸಂಘಟನೆ ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂದಿ ವಿರುದ್ಧ ಘೋಷಣೆ ಕೂಗುವಂತಿಲ್ಲ. ಈ ನಿಷೇದಾಜ್ಞೆಯು ಶವ ಯಾತ್ರೆ ಹಾಗೂ ಪೂರ್ವಾನುಮತಿ ಪಡೆದ ಮದುವೆ ಸಮಾರಂಭಗಳಿಗೆ ವಿನಾಯ್ತಿ ನೀಡಲಾಗಿದೆ. ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.