ETV Bharat / state

ಬೇಲೂರು ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ವಿರೋಧಿಸಿ ಪ್ರತಿಭಟನೆ - ಕುರಾನ್ ಪಠಣಕ್ಕೆ ಹಿಂದೂಗಳ ವಿರೋಧ

ಬೇಲೂರಿನ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೇಲೂರು ಚನ್ನಕೇಶವ ರಥೋತ್ಸವದಲ್ಲಿ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ

author img

By

Published : Mar 28, 2023, 8:19 PM IST

Updated : Mar 28, 2023, 8:52 PM IST

ಹಾಸನ: ವಿಶ್ವವಿಖ್ಯಾತ ಬೇಲೂರಿನ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮಂಗಳವಾರ ರಸ್ತೆಗಿಳಿದು ಪ್ರತಿಭಟನೆ ಮಾಡಿದರು. ಈ ವೇಳೆ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಘೋಷಣೆ ಕೂಗಿದ್ದರಿಂದ ಗೊಂದಲದ ವಾತಾವರಣ ಉಂಟಾಗಿತ್ತು.

ಬೇಲೂರಿನ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡುವುದು ಮೊದಲಿನಿಂದಲೂ ರೂಢಿಯಲ್ಲಿರುವ ಸಂಪ್ರದಾಯ. ಆದ್ರೆ ಈ ಬಾರಿ ಎಪ್ರಿಲ್‌ 4 ಮತ್ತು ಎಪ್ರಿಲ್‌ ‌5ರಂದು ನಡೆಯಲಿರುವ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಈ ಸಂಬಂಧ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಮಂಗಳವಾರ ಬೇಲೂರಿನ ದೇವಾಲಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬೈಕ್‌ನಲ್ಲಿ ಬಂದ ಯುವಕ ಘೋಷಣೆ ಕೂಗಿದ್ದನು. ಇದರಿಂದ ಪ್ರತಿಭಟನಾಕಾರರು ಮತ್ತು ಯುವಕನ ಮಧ್ಯೆ ವಾಗ್ವಾದ ನಡೆದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದರು.

ಸದ್ಯ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಂತೆ ಪೊಲೀಸ್‌ ಬಿಗಿ ಬಂದೋಬಸ್ತ್‌ ಕಲ್ಪಿಸಲಾಗಿದೆ. ಪ್ರತಿವರ್ಷ ಬೇಲೂರು ಚನ್ನಕೇಶವ ಸ್ವಾಮಿಯ ರಥೋತ್ಸವದ ವೇಳೆ ಕುರಾನ್ ಪಠಣ ಮಾಡುವ ಆಚರಣೆ ಇದೆ. ಆದ್ರೆ ರತೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಕಳೆದ ವರ್ಷದಿಂದ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ.

ಇದನ್ನೂ ಓದಿ: ಮಸೀದಿ ಮುಂದೆ ಮಾರಮ್ಮನ ಕೊಂಡೋತ್ಸವ; ಚಾಮರಾಜನಗರ ಗಡಿಯಲ್ಲೊಂದು ಭಾವೈಕ್ಯತೆ

Last Updated : Mar 28, 2023, 8:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.