ETV Bharat / state

ನೋಡಲ್ ಅಧಿಕಾರಿಯನ್ನಾಗಿ ನೇಮಿಸಿರುವ ಅಧಿಸೂಚನೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ವಿಶೇಷ ಚೇತನದ ಯೋಜನೆಗಳ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿರುವ ಅಧಿಸೂಚನೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ವಿವಿದೋದ್ದೇಶ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

Hassan
ಹಾಸನ ಪ್ರತಿಭಟನೆ
author img

By

Published : Sep 10, 2020, 10:17 PM IST

ಹಾಸನ: ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ವಿಶೇಷ ಚೇತನದ ಯೋಜನೆಗಳ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿರುವ ಅಧಿಸೂಚನೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಗುರುವಾರ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ವಿವಿದೋದ್ದೇಶ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಪ್ರಸ್ತುತ 6,022 ಗ್ರಾಮ ಪಂಚಾಯಿತಿಗಳ ಪೈಕಿ 4906 ಅರ್ಹ ಎಸ್.ಎಸ್.ಎಲ್.ಸಿ. ಪಾಸಾದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ, (ವಿಆರ್‌ಡಬ್ಲೂ) ಮತ್ತು 225 ತಾಲೂಕುಗಳ ಪೈಕಿ 169 ತಾಲ್ಲೂಕು ಪಂಚಾಯಿತಿಗಳಿಗೆ ಅರ್ಹ ಪದವೀಧರ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಹಾಗೂ ತಾಲ್ಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಿಸಲಾಗಿದೆ.

ಅಂಗವಿಕಲ ಗ್ರಾಮೀಣ ಪುನರ್ವಸತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಸದೃಢಗೊಳಿಸಿ ವಿ.ಆರ್.ಡಬ್ಲ್ಯೂ ಎಂಅರ್‌ಡಬ್ಲ್ಯೂ ಯುಆರ್.ಡಬ್ಲ್ಯೂ ರವರನ್ನು ಬಲಗೊಳಿಸದೇ ವಿಕಲಚೇತನರು ಮತ್ತು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಮಧ್ಯೆ ಕೊಂಡಿಯಂತೆ ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿ ಬಂದಿದೆ. ಮಾರ್ಗದರ್ಶಿ ಸೂತ್ರಗಳನ್ನು ಮತ್ತು ನಿಯಮಗಳನ್ನು ಗಾಳಿಗೆ ತೂರಿ ಉಲ್ಲೇಖಿತ ಪತ್ರದಲ್ಲಿರುವಂತೆ ಎ.ಸಿ.ಡಿ.ಪಿ.ಓ. ರವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿರುವುದು ಖಂಡನೀಯ ಎಂದರು.

ಈ ವ್ಯವಸ್ಥೆಯನ್ನು ತಾಲ್ಲೂಕು ನೋಡಲ್ ಅಧಿಕಾರಿಗಳು ಈ ಕೂಡಲೇ ರದ್ದುಗೊಳಿಸಬೇಕು, ಕನಿಷ್ಠ ಸೌಲಭ್ಯಗಳಿಂದ ವಂಚಿತರಾದ ಕಾರ್ಯಕರ್ತರ ಸೇವೆಯನ್ನು ಪರಿಗಣಿಸಿ ಮಾನವೀಯತೆಯ ಆಧಾರದಲ್ಲಿ ಗ್ರಾಮ ಮತ್ತು ತಾಲ್ಲೂಕು ಅಧಿಕಾರಿಗಳನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.