ಹಾಸನ: ಶಿವಮೊಗ್ಗದಿಂದ ಯಶವಂತಪುರಕ್ಕೆ ಪ್ರತಿನಿತ್ಯ ಸಂಚರಿಸುವ ಜನಶತಾಬ್ದಿ ರೈಲನ್ನು ಅರಸೀಕೆರೆ ಜಂಕ್ಷನ್ ನಲ್ಲಿ ನಿಲ್ಲಿಸಲು ಒತ್ತಾಯಿಸಿ, ರೈತ ಸಂಘ ಮತ್ತು ಇನ್ನಿತರ ಸಂಘ ಸಂಸ್ಥೆಗಳು ರೈಲು ನಿಲ್ದಾಣ ಮುಂಭಾಗದಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ರೈಲ್ವೆ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.
ಕಳೆದ ಒಂದೂವೆರೆ ತಿಂಗಳಿಂದ ಜಿಲ್ಲಾ ರೈತ ಸಂಘದ ಸಂಚಾಲಕ ಕನಕಚ್ಚೆನಹಳ್ಳಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಜನಶತಾಬ್ದಿ ರೈಲಿನ ನಿಲುಗಡೆಗೆಯ ಒತ್ತಾಯದ ಚಳುವಳಿ, ದಿನೇ ದಿನೇ ಕಾವೇರುತ್ತಿರುವುದು ಅಧಿಕಾರಿಗಳ ನಿರ್ಲಕ್ಷಕ್ಕೆ ಮೂಲ ಕಾರಣವಾಗಿದೆ ಎಂದು ಪ್ರತಿಭಟನೆ ನಡೆಸುತ್ತಿರುವ ಸಂಘ ಸಂಸ್ಥೆಗಳ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ಮುಖಂಡ ಪ್ರಸನ್ನಕುಮಾರ್ ಮಾತನಾಡಿ, ರೈಲು ನಿಲುಗಡೆಗೆ ರೈಲ್ವೈ ಇಲಾಖೆ ಅಧಿಕಾರಿಗಳು ಮೀನಾ ಮೇಷವನ್ನು ಎಣಿಸುತ್ತಿದ್ದು, ನಮ್ಮ ಬೇಡಿಕೆಗೆ ಸ್ಪಂದಿಸದೇ ಮಲತಾಯಿ ಧೋರಣೆಯನ್ನು ತೋರುತ್ತಿದ್ದಾರೆ. ಮುಂದಿನ ದಿನದಲ್ಲಿ ನಮ್ಮ ಹೋರಾಟಕ್ಕೆ ಸ್ಪಂಧಿಸದೇ ಇದ್ದರೇ ರೈಲು ತಡೆದು ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದ್ರು.