ETV Bharat / state

ಅತಿಥಿ ಉಪನ್ಯಾಸಕರುಗಳ ರಾಜ್ಯ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ - Protest in front of District Collector's Office

ಪ್ರಸ್ತುತ ನೇಮಕಾತಿಯ ಅಧಿಸೂಚನೆಗೆ ಸಂಬಂಧಪಟ್ಟಂತೆ ಇಲಾಖೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸುವಂತೆ ಕೇಳಲಾಗಿತ್ತು. ಸಲಹೆ, ಆಕ್ಷೇಪಣೆ ಸಲ್ಲಿಸಿದ್ದರೂ ಸಹ ಯಾವುದನ್ನೂ ಇಲಾಖೆ ಪರಿಗಣಿಸಿಲ್ಲ..

ರಾಜ್ಯ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

author img

By

Published : Jul 21, 2020, 8:34 PM IST

ಹಾಸನ : ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಖಾಯಂಗೊಳಿಸಲು ಆಗ್ರಹಿಸಿ, ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳ ರಾಜ್ಯ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ14,564 ಅತಿಥಿ ಉಪನ್ಯಾಸಕರು ಕನಿಷ್ಟ ವೇತನ ಪಡೆದು ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಕೋವಿಡ್ ಸಂಕಷ್ಟದ ಈ ದಿನಗಳಲ್ಲಿ 4 ತಿಂಗಳುಗಳಿಂದ ವೇತನವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಮಧ್ಯೆ ಗಾಯದ ಮೇಲೆ ಬರೆ ಎಂಬಂತೆ ಕಾಲೇಜು ಶಿಕ್ಷಣ ಇಲಾಖೆ ಹೊಸದಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ 2020 ಜುಲೈ7ರಂದು ಅಧಿಕೃತ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇದರಿಂದ 2400ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದರು.

ಪ್ರಸ್ತುತ ನೇಮಕಾತಿಯ ಅಧಿಸೂಚನೆಗೆ ಸಂಬಂಧಪಟ್ಟಂತೆ ಇಲಾಖೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸುವಂತೆ ಕೇಳಲಾಗಿತ್ತು. ಸಲಹೆ, ಆಕ್ಷೇಪಣೆ ಸಲ್ಲಿಸಿದ್ದರೂ ಸಹ ಯಾವುದನ್ನೂ ಇಲಾಖೆ ಪರಿಗಣಿಸಿಲ್ಲ. ಈ ಬಗ್ಗೆ ನಿಯಮಾನುಸಾರ ಆಕ್ಷೇಪಣೆ ಮತ್ತು ಸಲಹೆಗಳಿಗೆ ವಿವರಣೆಯನ್ನು ಸಹ ಇಲಾಖೆ ನೀಡಿರುವುದಿಲ್ಲ. ಇದು ನಮ್ಮೆಲ್ಲರನ್ನು ಆತಂಕಕ್ಕೀಡು ಮಾಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.