ETV Bharat / state

ಹಾಸನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲು-ತುಪ್ಪ ಬಿಟ್ಟು ಪ್ರತಿಭಟನೆ - protest to make road in hasan

ಹಾಸನ ಜಿಲ್ಲೆಯ ಬಾಳ್ಳುಪೇಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಿವಿಧ ಸಂಘಟನೆಗಳ ಸದಸ್ಯರು ರಸ್ತೆಯನ್ನು ಮರು ಡಾಂಬರೀಕರಣ ಮಾಡುವಂತೆ ಆಗ್ರಹಿ ಹಾಲ-ತುಪ್ಪ ಬಿಡುವ ಮೂಲಕ ಪ್ರತಿಭಟಿಸಿದರು.

ರಸ್ತೆ ಸೆಇಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ
author img

By

Published : Oct 26, 2019, 11:29 AM IST

ಹಾಸನ: ರಾಷ್ಟ್ರೀಯ ಹೆದ್ದಾರಿ 75 ಮರು ಡಾಂಬರೀಕರಣಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ವತಿಯಿಂದ ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಅಂಗವಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿರುವ ವಿವಿಧ ಅಪಘಾತಗಳಲ್ಲಿ ಮೃತಪಟ್ಟವರ ಸ್ಮರಣಾರ್ಥ ಹಾಲು-ತುಪ್ಪ ಬಿಡುವ ಮುಖಾಂತರ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ವಹಿಸಿಕೊಂಡಿದ್ದ ತಾಪಂ ಸದಸ್ಯ ಯಡೆಹಳ್ಳಿ ಮಂಜುನಾಥ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75 ದುರಸ್ತಿಗೆ ಆಗ್ರಹಿಸಿ 3 ದಿನಗಳಿಂದ ಪ್ರತಿಭಟನೆ ಮಾಡಲಾಗುತ್ತಿದ್ದರೂ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಬೇಕಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು ಬಂದಿಲ್ಲ. ಇದೇ ರೀತಿ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಸಹ ಸ್ಥಳಕ್ಕೆ ಬಂದಿಲ್ಲ. ಇವರು ಸ್ಥಳಕ್ಕೆ ಬಂದು ರಸ್ತೆ ದುರಸ್ತಿ ಮಾಡುವ ಸೃಷ್ಟ ಭರವಸೆ ನೀಡುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಈ ವೇಳೆ ಬಾಳ್ಳುಪೇಟೆ ವೃತ್ತದ ಬಳಿ ಕೆಲಕಾಲ ರಸ್ತೆ ತಡೆ ಮಾಡಿದ್ದರಿಂದ ಹೆದ್ದಾರಿಯ ಎರಡೂ ಬದಿಯಲ್ಲಿ 3 ಕಿ.ಮೀ.ಗೂ ಅಧಿಕ ದೂರ ಟ್ರಾಫಿಕ್ ಜಾಂ ಉಂಟಾಗಿತ್ತು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಪ್ರತಿಭಟನೆ ಮಾಡದಂತೆ ಪೊಲೀಸರು ಮನವಿ ಮಾಡಿದಾಗ ಪ್ರತಿಭಟನಕಾರರು ಒಪ್ಪಿರಲಿಲ್ಲ. ನಂತರ ಗ್ರಾಮಾಂತರ ಠಾಣೆಯ ಪಿಎಸ್‌ಐ ಬ್ಯಾಟರಾಯನಗೌಡ ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಅಂತಿಮವಾಗಿ ಸಂಜೆ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸುತ್ತಾರೆ ಎಂದು ಪೊಲೀಸರು ತಿಳಿಸಿದ್ದರಿಂದ ರಸ್ತೆ ತಡೆ ಹಿಂಪಡೆಯಲಾಯಿತು.

Intro:ಹಾಸನ \ ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ ೭೫ ಮರುಡಾಂಬರಿಕರಣಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ವತಿಯಿಂದ ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ೩ ನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನೆ ಅಂಗವಾಗಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ನಡೆದಿರುವ ವಿವಿಧ ಅಪಘಾತಗಳಲ್ಲಿ ಮೃತಪಟ್ಟವರ ಸ್ಮರಣಾರ್ಥ ಹಾಲು ತುಪ್ಪ ಬಿಡುವ ಮುಖಾಂತರ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.

ರಾಷ್ಟ್ರೀಯ ಹೆದ್ದಾರಿ ೭೫ ಮರುಡಾಂಬರಿಕರಣಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ವತಿಯಿಂದ ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ಕಳೆದ ೩ ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಉದೇಶಿಸಿ ಪ್ರತಿಭಟನೆಯ ನೇತೃತ್ವವನ್ನು ವಹಿಸಿಕೊಂಡಿರುವ ತಾ.ಪಂ ಸದಸ್ಯ ಯಡೆಹಳ್ಳಿ ಮಂಜುನಾಥ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ೭೫ ದುರಸ್ತಿಗೆ ಆಗ್ರಹಿಸಿ ಕಳೆದ ೩ ದಿನಗಳಿಂದ ಪ್ರತಿಭಟನೆ ಮಾಡಲಾಗುತ್ತಿದ್ದು ಆದರೂ ಸಹ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಬೇಕಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಇದೇ ರೀತಿ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಸಹ ಸ್ಥಳಕ್ಕೆ ಬಂದಿಲ್ಲ. ಇವರು ಸ್ಥಳಕ್ಕೆ ಬಂದು ರಸ್ತೆ ದುರಸ್ತಿ ಮಾಡುವ ಸೃಷ್ಟ ಭರವಸೆ ನೀಡುವವರೆಗೂ ನಾವು ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದರು.

ಈ ಸಮಯದಲ್ಲಿ ಬಾಳ್ಳುಪೇಟೆ ವೃತ್ತದ ಬಳಿ ಕೆಲ ನಿಮಿಷಗಳ ಕಾಲ ರಸ್ತೆ ತಡೆ ಮಾಡಿದ್ದರಿಂದ ಹೆದ್ದಾರಿ ಎರಡು ಬದಿಯಲ್ಲಿ ೩ ಕಿ.ಮಿಗೂ ಹೆಚ್ಚು ದೂರ ಟ್ರಾಫಿಕ್ ಜಾಂ ಉಂಟಾಗಿತ್ತು. ಈ ಸಂಧರ್ಭದಲ್ಲಿ ರಸ್ತೆಯಲ್ಲಿ ಪ್ರತಿಭಟನೆ ಮಾಡದಂತೆ ಪೋಲಿಸರು ಮನವಿ ಮಾಡಿದಾಗ ಇದನ್ನು ಒಪ್ಪದ ಪ್ರತಿಭಟನಕಾರರು ಹಾಗೂ ಗ್ರಾಮಾಂತರ ಠಾಣೆಯ ಪಿಎಸ್‌ಐ ಬ್ಯಾಟರಾಯನಗೌಡರ ನಡುವೆ ಕೆಲಕಾಲ ಮಾತಿನ ಚಕಾಮುಖಿ ನಡೆಯಿತು. ಅಂತಿಮವಾಗಿ ಸಂಜೆಯ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸುತ್ತಾರೆ ಎಂದು ಪೋಲಿಸರು ತಿಳಿಸಿದ್ದರಿಂದ ರಸ್ತೆ ತಡೆ ಹಿಂಪಡೆಯಲಾಯಿತು.

ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ, ಟಿಎಸಿಪಿಸಿಎಮ್‌ಎಸ್ ಅಧ್ಯಕ್ಷ ಲೋಹಿತ್ ಕೌಡಹಳ್ಳಿ, ಗ್ರಾ.ಪಂ ಅಧ್ಯಕ್ಷೆ ಶಿಲ್ಪಾ ಮಲ್ಲಿಕ್,ಮಾಜಿ ಗ್ರಾ.ಪಂ ಅಧ್ಯಕ್ಷೆ ರೂಪ ರಾಜೇಶ್, ಕಸಾಪ ಬೆಳಗೋಡು ಹೋಬಳಿ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಹೋರಾಟಗಾರ ಬಾಳ್ಳು ಗೋಪಾಲ್, ಜೈಭೀಮ್ ಮಂಜುನಾಥ್, ಕರವೇ ತಾಲೂಕು ಅಧ್ಯಕ್ಷ ದಿನೇಶ್, ರೈತ ಸಂಘದ ಅಧ್ಯಕ್ಷ ಗಿರೀಶ್, ಬಿ.ಎಸ್ ಮಲ್ಲಿಕಾರ್ಜುನ್, ಬೆಳೆಗಾರರ ಸಂಘದ ಬಸವಣ್ಣ, ರಘು ಪಾಳ್ಯ, ಲಯನ್ಸ್ ಕ್ಲಬ್ ಬಾಳ್ಳುಪೇಟೆ ಘಟಕದ ಅಧ್ಯಕ್ಷ ಸಂತೋಷ್, ಮುಂತಾದವರು ಹಾಜರಿದ್ದರು.Body:ಬೈಟ್ : ಯಡೇಹಳ್ಳಿ‌ ಮಂಜುನಾಥ್, ತಾಲೂಕು‌ ಪಂಚಾಯಿತಿ ಸದಸ್ಯ.Conclusion:- ಅರಕೆರೆ ಮೋಹನಕುಮಾರ, ಈಟಿವಿ ಭಾರತ,‌ ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.