ಹಾಸನ : ವಿದ್ಯುತ್ ಇಲಾಖೆಯ ಖಾಸಗೀಕರಣ ಮತ್ತು ಹೊರಗುತ್ತಿಗೆಗೆ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ಕೆಪಿಟಿಸಿಎಲ್ ಸಿಬ್ಬಂದಿ ತೋಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು.
ನಗರದ ಸಾಲಗಾಮೆ ರಸ್ತೆಯ ಸೆಸ್ಕಾಂ ಕಚೇರಿ ಮುಂದೆ ಜಮಾಯಿಸಿದ ಸಿಬ್ಬಂದಿ, ಸರ್ಕಾರ ಮಸೂದೆಗೆ ತಿದ್ದುಪಡಿ ತಂದು ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡಿ ಹೊರಗುತ್ತಿಗೆ ನೀಡಲು ಮುಂದಾಗಿರುವುದು ಕಾರ್ಮಿಕ ಮತ್ತು ರೈತ ವಿರೋಧಿ ನೀತಿಯಾಗಿದೆ. ಇದರಿಂದ ಜನರಿಗೆ ಮುಖ್ಯವಾಗಿ ಕಾರ್ಮಿಕರಿಗೆ ಅನಾನುಕೂಲವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಕೆಪಿಟಿಸಿಎಲ್ ಎಂಪ್ಲಾಯಿಸ್ ಯೂನಿಯನ್ ಉಪಾಧ್ಯಕ್ಷ ಸುಂದ್ರೇಗೌಡ, ಇಂದು ಹಾಸನ ನಗರ ವ್ಯಾಪ್ತಿಯ ಆಯಾ ವಿದ್ಯುತ್ ಇಲಾಖೆ ಕಚೇರಿಗಳ ಮುಂದೆ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ ಎಂದರು.