ಹಾಸನ: ಹೈದರಾಬಾದ್ನಲ್ಲಿ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಹೈದರಾಬಾದ್ನಲ್ಲಿ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಗೃಹಮಂತ್ರಿಗಳು ನೀಡಿದ ಹೇಳಿಕೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಈ ಕೂಡಲೇ ಸರಕಾರವು ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಮನವಿ ಮಾಡಿದರು.