ETV Bharat / state

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಕಲೇಶಪುರದಲ್ಲಿ ಬೃಹತ್ ಪ್ರತಿಭಟನೆ

ಸಕಲೇಶಪುರ ಭಾಗದ ಸುಮಾರು 25 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ 70ಕ್ಕೂ ಹೆಚ್ಚು ಕಾಡಾನೆಗಳ ಸಂಚಾರವಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಅವರಿಗೂ ಕೂಡ ಟ್ವೀಟ್ ಮೂಲಕ ತಿಳಿಸಿದರು ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಶಾಸಕ ಎಚ್​.ಕೆ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ರು .

protest in sakleshpur
ಸಕಲೇಶಪುರದಲ್ಲಿ ಪ್ರತಿಭಟನೆ
author img

By

Published : Sep 2, 2020, 1:22 AM IST

ಸಕಲೇಶಪುರ: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಂತೆ ಆಗ್ರಹಿಸಿ ಶಾಸಕ ಎಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.

ಸಕಲೇಶಪುರದಲ್ಲಿ ಪ್ರತಿಭಟನೆ

ಕಾಡಾನೆಗಳ ದಾಳಿಯಿಂದ ತಾಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ಅಸ್ತಿಕ ಭಟ್ ಎಂಬುವರು ಮೃತಪಟ್ಟ ಹಿನ್ನೆಲೆ ಆಕ್ರೋಶಗೊಂಡ ಬೆಳೆಗಾರರು ಕರ್ನಾಟಕ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಬೆಳೆಗಾರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣ, ಕರವೇ ಸ್ವಾಭಿಮಾನಿ ಸೇವೆ, ನಮ್ಮ ಕರವೇ ಸಂಘಟನೆಗಳ ನೇತೃತ್ವದಲ್ಲಿ ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಎಚ್.ಕೆ ಕುಮಾರಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ 70ಕ್ಕೂ ಹೆಚ್ಚು ಕಾಡಾನೆಗಳ ಸಂಚಾರವಿದೆ. ಈ ಕುರಿತು ವರದಿಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಅಲ್ಲಿಂದ ಸರ್ಕಾರ ಹಾಗೂ ಪರಿಸರ ಇಲಾಖೆಗೂ ಕೂಡ ವರದಿ ಸಲ್ಲಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದ್ರು.

ಮಲೆನಾಡು ಭಾಗದಲ್ಲಿ ಕಾಡಾನೆ ಸಮಸ್ಯೆ ತೀವ್ರಗತಿಯಲ್ಲಿ ಇರುವುದರಿಂದ ಪ್ರಧಾನಿ ಮೋದಿ ಅವರಿಗೂ ಕೂಡ ಟ್ವೀಟ್ ಮೂಲಕ ತಿಳಿಸಿದರು ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು. ಇನ್ನೊಂದು ವಾರದಲ್ಲಿ ಕ್ರಮ ಕೈಗೊಳ್ಳದಿದ್ದಲ್ಲಿ ಸಕಲೇಶಪುರ ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದರು.

ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಗಿರೀಶ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಈ ವಾರದಲ್ಲಿ ಕಾಫಿ ಬೆಳೆಗಾರರು, ರೈತರು ಹಾಗೂ ಹೋರಾಟಗಾರರ ಜೊತೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಕಾಡಾನೆಗಳನ್ನು ಸೆರೆಹಿಡಿಯಲು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ನನ್ನ ಮೇಲೆ ಭರವಸೆ ಇಡಿ, ಪ್ರತಿಭಟನೆಯನ್ನು ಹಿಂಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಜಿ.ಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ತೀರ್ಥಮಲ್ಲೇಶ್, ಹಾಸನ ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ತೊ.ಚಾ ಅನಂತಸುಬ್ಬರಾಯ ಮತ್ತಿತರರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.