ETV Bharat / state

ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡಲು ಡಿಸಿ ಆರ್. ಗಿರೀಶ್ ಸಲಹೆ - ರಫ್ತು ಜಾಗೃತಿ ಶಿಬಿರ ಕಾರ್ಯಕ್ರಮ

ಒಂದು ದಿನದ ರಫ್ತು ಜಾಗೃತಿ ಶಿಬಿರ ಕಾರ್ಯಕ್ರಮ ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

District Collector R.Girish
ಜಿಲ್ಲಾಧಿಕಾರಿ ಆರ್. ಗಿರೀಶ್
author img

By

Published : Feb 26, 2020, 11:55 PM IST

ಹಾಸನ: ಯಾವುದೇ ಉದ್ಯಮಗಳಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ರಫ್ತು ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಲಾಭಗಳಿಸಬಹುದಾಗಿದೆ. ಈ ನಿಟ್ಟಿನಲ್ಲಿ ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ನಗರದ ಹೋಟೆಲ್ ಜ್ಯುವೆಲ್ ರಾಕ್‍ನಲ್ಲಿ ಬೆಂಗಳೂರು ಹಾಗೂ ಮೈಸೂರು ಶಾಖೆಯ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಕರ್ನಾಟಕ ಸರ್ಕಾರ ರಫ್ತು ಉತ್ತೇಜನ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಭಾವಿ ರಫ್ತುದಾರರಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ರಫ್ತು ಜಾಗೃತಿ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ರಫ್ತು ಮಾಡುವುದಕ್ಕಿಂತ ಆಮದು ಮಾಡಿಕೊಳ್ಳುವ ಪ್ರಮಾಣವೇ ಹೆಚ್ಚಾಗಿದೆ. ಕೇವಲ ದೊಡ್ಡ ಉದ್ಯಮಗಳೇ ಉತ್ಪನ್ನಗಳನ್ನು ರಫ್ತು ಮಾಡಬೇಕೆನ್ನುವ ನಿಯಮವಿಲ್ಲ, ಸಣ್ಣ ಉದ್ದಿಮೆದಾರರೂ ಕೂಡ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ರಫ್ತು ಮಾಡಬಹುದಾಗಿದೆ ಎಂದರು.

ರಫ್ತು ಜಾಗೃತಿ ಶಿಬಿರ ಕಾರ್ಯಕ್ರಮ

ನಮ್ಮ ದೇಶದಲ್ಲಿ ಉತ್ತಮ ಗುಣಮಟ್ಟದ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಮಾನವ ಸಂಪನ್ಮೂಲ ದೊರೆಯುವುದರಿಂದ ಹೆಚ್ಚು ಉತ್ಪಾದನೆ ಮಾಡಿ ಅಧಿಕ ಲಾಭ ಗಳಿಸಬಹುದು. ಈ ನಿಟ್ಟಿನಲ್ಲಿ ಯುವ ಉದ್ಯಮಿಗಳು ಉತ್ಪನ್ನವನ್ನು ರಫ್ತು ಮಾಡಲು ಸರಿಯಾದ ಮಾಹಿತಿ ಪಡೆದು ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದರು.

ಉದ್ದಿಮೆದಾರರು ತಮ್ಮ ಉತ್ಪನ್ನಗಳನ್ನು ಯಾವ ರೀತಿ ರಫ್ತು ಮಾಡಬೇಕು, ಎಲ್ಲಿ ರಫ್ತು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡುವ ಸಲುವಾಗಿ ಈ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.