ETV Bharat / state

ನಿಶ್ಚಿತಾರ್ಥವಾಗಿದ್ದ ಅಪ್ರಾಪ್ತೆಯ ಅತ್ಯಾಚಾರ, ಕೊಲೆ; ಬಳಿಕ ಯುವಕನೂ ಆತ್ಮಹತ್ಯೆ - ಈಟಿವಿ ಭಾರತ ಕನ್ನಡ ನ್ಯೂಸ್​​

ನಿಶ್ಚಯ ಮಾಡಿಕೊಂಡಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಯುವಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಕೊಣನೂರು ಗ್ರಾಮದಲ್ಲಿ ನಡೆದಿದೆ.

​​rape-and-murder-of-an-engaged-minor-in-hasana
ನಿಶ್ಚಿತಾರ್ಥ ಆಗಿದ್ದ ಅಪ್ರಾಪ್ತೆಯ ಅತ್ಯಾಚಾರ,ಕೊಲೆ : ಮರ್ಯಾದೆಗೆ ಅಂಜಿ ಭಾವಿ ಪತಿ ಆತ್ಮಹತ್ಯೆ
author img

By

Published : Dec 8, 2022, 8:35 PM IST

Updated : Dec 8, 2022, 8:46 PM IST

ಹಾಸನ: ನಿಶ್ಚಯ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಜಿಲ್ಲೆಯ ಕೊಣನೂರು ಗ್ರಾಮದಲ್ಲಿ ನಡೆದಿದೆ.

ಕೊಣನೂರು ಸಮೀಪದ ರಾಮನ ಕೊಪ್ಪಲು ಗ್ರಾಮದ ಅಪ್ರಾಪ್ತೆಯೊಂದಿಗೆ ಕಡಲೂರು ಗ್ರಾಮದ ದಿನೇಶ್​​ ಎಂಬಾತನಿಗೆ ನಿಶ್ಚಿತಾರ್ಥ ಮಾಡಲಾಗಿತ್ತು. ಹುಡುಗಿಗೆ 18 ವರ್ಷ ತುಂಬಲು ಇನ್ನೂ 6 ತಿಂಗಳು ಕಾಯಬೇಕಾಗಿತ್ತು. ನಿಶ್ಚಿತಾರ್ಥವಾದ ನಂತರ ದಿನೇಶ್ ಆಕೆಯ ಮನೆಗೆ ಬಂದು ಹೋಗುತ್ತಿದ್ದನಂತೆ. ಅಂತೆಯೇ ಆಕೆಯೂ ಕೂಡಾ ದಿನೇಶ್ ಮನೆಗೆ ಬರುತ್ತಿದ್ದಳು.

ಒಂದು ದಿನ ಬಾಲಕಿ ದಿನೇಶ್ ಮನೆಗೆ ಬಂದಿದ್ದು, ದಿನೇಶ್ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಚಾರವನ್ನು ಪೋಷಕರಿಗೆ ತಿಳಿಸುವುದಾಗಿ ಹೇಳಿದಾಗ ಆಕೆ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬಿಂಬಿಸಲು ಯತ್ನಿಸಿದ್ದಾನೆ.

ಹಾಸನ ಎಸ್ಪಿ ಹರಿರಾಂ ಶಂಕರ್​ ಮಾಹಿತಿ

ಕಳೆದ ನವೆಂಬರ್ 28 ರಂದು ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿರುವುದು ಮತ್ತು ಅತ್ಯಾಚಾರ ನಡೆಸಿರುವುದು ತಿಳಿದುಬಂದಿದೆ ಎಂದು ಎಸ್ಪಿ ಹರಿರಾಂ ಶಂಕರ್​ ಹೇಳಿದರು.

ಬಾಲಕಿಯನ್ನು ಕೊಂದ ದಿನೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆತನೂ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಆರೋಪಿ ಸ್ಥಾನದಲ್ಲಿದ್ದ ಹುಡುಗನ ಹತ್ಯೆ

Last Updated : Dec 8, 2022, 8:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.