ಹಾಸನ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜು. 11ರಿಂದ 26ರವರೆಗೆ ಜಿಲ್ಲೆಯಲ್ಲಿ ಕ್ಷೌರಿಕ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷ ರವಿಕುಮಾರ್ ತಿಳಿಸಿದರು.
ರಾಜ್ಯದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಹದಿನೈದು ದಿನ ಸಲೂನ್ ಬಂದ್ ಮಾಡಲು ನಿರ್ಧರಿಸಲಾಗಿದೆ. ಆರೋಗ್ಯ ಸುರಕ್ಷತಾ ಪರಿಕರಗಳಾದ ಮಾಸ್ಕ್, ಪಿಪಿಇ ಕಿಟ್ ಬಳಸಿಯೂ ವೈದ್ಯರಿಗೆ ಸೋಂಕು ತಗುಲಿದೆ. ವ್ಯಕ್ತಿಗಳನ್ನು ಮುಟ್ಟದೆ, ಅಂತರ ಪಾಲನೆ ಮಾಡಿಕೊಂಡು ಕ್ಷೌರ ಮಾಡಲು ಸಾಧ್ಯವಿಲ್ಲ. ಹಾಗಾಗಿ ಗ್ರಾಹಕರು ಮತ್ತು ಕ್ಷೌರಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ತಾಲೂಕು, ಹೋಬಳಿ ಮಟ್ಟದಲ್ಲಿಯೂ ಬಂದ್ ಮಾಡಲಾಗುವುದು ಎಂದು ಜಿಲ್ಲೆಯ ಸವಿತಾ ಸಮಾಜದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಲಾಕ್ಡೌನ್ನಿಂದ ಈವರೆಗೂ ನಷ್ಟ ಅನುಭವಿಸುತ್ತಿರುವ ಸವಿತಾ ಸಮಾಜದವರಿಗೆ ಸರ್ಕಾರ ಮತ್ತಷ್ಟು ಆರ್ಥಿಕ ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.