ETV Bharat / state

ನಾಳೆಯ ಎಸ್ಎಸ್ಎಲ್​​ಸಿ ಪರೀಕ್ಷೆಗೆ ಸಕಲ ಸಿದ್ಧತೆ.. ಜಿಲ್ಲಾಧಿಕಾರಿ ಆರ್ ಗಿರೀಶ್ ಮಾಹಿತಿ - DC Girish

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕೊವೀಡ್-19 ರೋಗ ಲಕ್ಷಣಗಳಾದ ಕೆಮ್ಮು, ಶೀತ, ಜ್ವರ ಇರುವ ವಿದ್ಯಾರ್ಥಿಗಳಿಗಾಗಿ 2 ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಿ ಪರೀಕ್ಷೆ ಬರೆಸಲಾಗುತ್ತದೆ. ಪ್ರತಿ ವಿದ್ಯಾರ್ಥಿಗೂ ಪುನರ್‍ಬಳಕೆ ಮಾಡುವಂತಹ 2 ಮಾಸ್ಕ್‌ಗಳನ್ನು ವಿತರಣೆ ಮಾಡಲಾಗುತ್ತದೆ..

ಜಿಲ್ಲಾಧಿಕಾರಿ ಆರ್. ಗಿರೀಶ್
ಜಿಲ್ಲಾಧಿಕಾರಿ ಆರ್. ಗಿರೀಶ್
author img

By

Published : Jun 24, 2020, 8:51 PM IST

ಹಾಸನ : ಗುರುವಾರದಿಂದ ಜುಲೈ 4ರವರೆಗೆ ಎಸ್ಎಸ್ಎಲ್​​ಸಿ ಪರೀಕ್ಷೆ ನಡೆಯಲಿದೆ. ಜಿಲ್ಲಾಡಳಿತ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 89 ಕೇಂದ್ರಗಳಿದ್ದು, 21,257 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಡಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಗರಿಷ್ಠ ಮುಂಜಾಗ್ರತೆ ವಹಿಸಲಾಗಿದೆ. ಎಲ್ಲಾ ಕೇಂದ್ರಗಳನ್ನು ಸ್ಯಾನಿಟೈಸಿಂಗ್ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮೂಲಕ ಪರೀಕ್ಷಿಸಿ ಕೇಂದ್ರದೊಳಗೆ ಕಳುಹಿಸಲಾಗುತ್ತದೆ ಎಂದರು.

ಪರೀಕ್ಷೆಗೆ 3,500 ವಿದ್ಯಾರ್ಥಿಗಳು ಕಾಲ್ನಡಿಗೆಯ ಮೂಲಕ, 13,866 ವಿದ್ಯಾರ್ಥಿಗಳು ಪೋಷಕರೊಂದಿಗೆ, 266 ವಿದ್ಯಾರ್ಥಿಗಳು ಸೈಕಲ್ ಹಾಗೂ 432 ವಿದ್ಯಾರ್ಥಿಗಳು ಖಾಸಗಿ ಶಾಲಾ ವಾಹನಗಳ ಮೂಲಕ, 2952 ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್​​ಗಳ ಮೂಲಕ ಹಾಜರಾಗುತ್ತಿದ್ದಾರೆ. 241 ವಿದ್ಯಾರ್ಥಿಗಳು ಹಾಸ್ಟೆಲ್‍ನಲ್ಲಿ ಉಳಿದುಕೊಂಡಿರುತ್ತಾರೆ ಎಂದರು.

ಜಿಲ್ಲಾಧಿಕಾರಿ ಆರ್. ಗಿರೀಶ್

ಜಿಲ್ಲೆಯಲ್ಲಿ 134 ಮಾರ್ಗಗಳಲ್ಲಿ 142 ಬಸ್​​​ಗಳು ಮತ್ತು 342 ನಿಲುಗಡೆ ಸ್ಥಳಗಳನ್ನು ಗುರುತಿಸಲಾಗಿದೆ. ಸರ್ಕಾರಿ ಬಸ್​​ಗಳು ಲಭ್ಯವಿಲ್ಲದಿರುವ ಕಡೆಗಳಲ್ಲಿ ಖಾಸಗಿ, ಅನುದಾನಿತ ಶಾಲೆ ಬಸ್​​ಗಳನ್ನು ಪಡೆಯಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಬಸ್‍ಗಳನ್ನು ಸ್ಯಾನಿಟೈಸ್ ಮಾಡುವುದು, ಪ್ರತಿ ಬಸ್ಸಿನಲ್ಲಿ ಕನಿಷ್ಠ 30 ವಿದ್ಯಾರ್ಥಿಗಳು ಮತ್ತು 1 ಮೀಟರ್ ದೈಹಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕೊವೀಡ್-19 ರೋಗ ಲಕ್ಷಣಗಳಾದ ಕೆಮ್ಮು, ಶೀತ, ಜ್ವರ ಇರುವ ವಿದ್ಯಾರ್ಥಿಗಳಿಗಾಗಿ 2 ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಿ ಪರೀಕ್ಷೆ ಬರೆಸಲಾಗುತ್ತದೆ. ಪ್ರತಿ ವಿದ್ಯಾರ್ಥಿಗೂ ಪುನರ್‍ಬಳಕೆ ಮಾಡುವಂತಹ 2 ಮಾಸ್ಕ್‌ಗಳನ್ನು ವಿತರಣೆ ಮಾಡಲಾಗುತ್ತದೆ. ಬೆಳಗ್ಗೆ 10:30ರಿಂದ ಪರೀಕ್ಷೆಗಳು ನಡೆಯಲಿವೆ. ಆದರೆ, ಬೆಳಗ್ಗೆ 7-30ಕ್ಕೆ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ವಿದ್ಯಾರ್ಥಿಗಳು ಆ ಸಮಯಕ್ಕೆ ಬಂದು ಕೊಠಡಿಗಳಲ್ಲಿ ಕುಳಿತು ಓದಿಕೊಳ್ಳಬಹುದು ಎಂದು ತಿಳಿಸಿದರು.

ಹೊರ ಜಿಲ್ಲೆಗಳಿಂದ ಬಂದಿರುವ 501 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಿಯಮಾನುಸಾರವಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 1,400 ಸಿಬ್ಬಂದಿ ಎಸ್ಎಸ್ಎಲ್​​ಸಿ ಪರೀಕ್ಷಾ ಸಂಬಂಧಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಇದುವರೆಗೂ ಒಟ್ಟಾರೆ ಕೋವಿಡ್-19 ಸೋಂಕಿತರ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಿಂದ 224 ಮಂದಿ ಬಿಡುಗಡೆಯಾಗಿದ್ದಾರೆ. 74 ಮಂದಿ ಸಕ್ರಿಯ ಸೋಂಕಿತರು ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಇಂದು ಪತ್ತೆಯಾದ ಪ್ರಕರಣ ಅರಸೀಕೆರೆ ತಾಲೂಕಿಗೆ ಸೇರಿದ್ದಾಗಿದೆ. ಅವರು ಬಿಎಂಟಿಸಿ ಬಸ್ ಚಾಲಕರಾಗಿದ್ದು, ಜ್ವರ ಬಂದ ಹಿನ್ನೆಲೆಯಲ್ಲಿ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.