ETV Bharat / state

ಹೇಮಾವತಿ ಜಲಾಶಯದಿಂದ ನೀರು ಬಿಡುಗಡೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ - Hemavathi Reservoir water level

ಕಳೆದ ಒಂದು ವಾರದಿಂದ ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ಹೇಮಾವತಿ ಜಲಾಶಯದಿಂದ ಅಲ್ಪ ಪ್ರಮಾಣದಲ್ಲಿ ನೀರು ಹೊರ ಬಿಡಲಾಗಿದೆ.

ಹೇಮಾವತಿ ಜಲಾಶಯದಿಂದ ನೀರು ಬಿಡುಗಡೆ
author img

By

Published : Aug 9, 2019, 2:01 AM IST

ಹಾಸನ: ಕಳೆದ ಒಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯದಿಂದ ಅಲ್ಪ ಪ್ರಮಾಣದಲ್ಲಿ ನೀರು ಹೊರ ಬಿಡಲಾಗಿದೆ.

ಹೇಮಾವತಿ ಜಲಾಶಯದಿಂದ ನೀರು ಬಿಡುಗಡೆ

ಗೊರೂರಿನ ಹೇಮಾವತಿ ಜಲಾಶಯದ ಒಳಹರಿವಿನ ಪ್ರಮಾಣ ಗುರುವಾರ ಬೆಳಗ್ಗೆ 48,133 ಕ್ಯುಸೆಕ್​ ಇದ್ದು, ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ 3000 ಕ್ಯೂಸೆಕ್​ ನೀರು ಹೊರ ಬಿಡಲಾಗಿದೆ.

ಹೇಮಾವತಿ ಜಲಾಶಯದ ಗರಿಷ್ಠ ಒಳಹರಿವು 37 ಟಿಎಂಸಿ ಸಾಮರ್ಥ್ಯ ಹೊಂದಿದೆ. ಆದ್ರೆ 23.27 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಭರ್ತಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್​ ನೀರನ್ನು ಹೊರ ಬಿಡಲಾಗಿದೆ.

ಜಲಾಶಯದಿಂದ ನೀರು ಹೊರಬಿಟ್ಟಿರುವುದರಿಂದ ತಗ್ಗು ಪ್ರದೇಶಗಳಾದ ಮರಡಿ, ಅತ್ನಿ, ಹೆಬ್ಬಾಲೆ, ಪಡುಲಿಪೆ, ಹೊಳೆನರಸೀಪುರ ಮತ್ತಿತರ ಗ್ರಾಮಗಳಿಗೆ ಮುನ್ನಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದ್ದಾರೆ.

ಇನ್ನು ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಆರ್ಭಟಕ್ಕೆ ಜಿಲ್ಲೆಯ ಸಕಲೇಶಪುರ, ಆಲೂರು, ಹಾಸನ, ಬೇಲೂರು, ಅರಕಲಗೂಡು ತಾಲೂಕುಗಳಲ್ಲಿರುವ ಅಂಗನವಾಡಿ ಹಾಗು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಇಂದು ಸಹ ರಜೆ ಘೋಷಿಸಿದ್ದಾರೆ.

Intro: ಹಾಸನ : ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆಯಲ್ಲಿ ಮಲೆನಾಡು ಭಾಗ ಭಾಗಶಃ ಮಳೆ ನೀರಿನಿಂದ ಕೂಡಿದ್ದು, ಹೇಮಾವತಿ ಜಲಾಶಯದಿಂದ ಅಲ್ಪ ಪ್ರಮಾಣದಲ್ಲಿ ನೀರು ಹೊರ ಬಿಡಲಾಗಿದೆ.
Body:ಗೊರೂರಿನ ಹೇಮಾವತಿ ಜಲಾಶಯ ಒಳಹರಿವು ಗುರುವಾರ ಬೆಳಿಗ್ಗೆ ೪೮,೧೩೩ ಕ್ಯುಸೆಕ್ಸ್ ನೀರು ಹರಿದು ಬರುತಿತ್ತು. ಗುರುವಾರ ಮಧ್ಯಾಹ್ನ ಆಲೂರು ತಾಲ್ಲೂಕಿನ ವಾಟೆಹೊಳೆ ಜಲಾಶಯದಿಂದ ೩೦೦೦ ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿದ್ದು, ಈ ಹಿನ್ನಲೆಯಲ್ಲಿ ಗೊರೂರಿನ ಹೇಮಾವತಿ ಹರಿದು ಬಂದ ನೀರು ೭೦ಸಾವಿರ ಕ್ಯೂಸೆಕ್ಸ್‌ನಿಂದ ಹಿನ್ನೀರು ಭರ್ತಿಗೊಂಡಿತು.
ಹೇಮಾವತಿ ಜಲಾಶಯದ ಗರಿಷ್ಟ ಒಳಹರಿವು ೩೭ ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಆದರೆ ೨೩.೨೭ ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಭರ್ತಿಯಾಗಿದ್ದರೂ ಸಹ ಮುನ್ನೆಚ್ಚರಿಕೆಯ ಕ್ರಮವಾಗಿ ನ್ಯಾಯಾಲಯದ ಆದೇಶ ಪಾಲನೆ ಮೇರೆಗೆ ಜಿಲ್ಲಾಡಳಿತದ ಆದೇಶ ನೀಡಿ ಜಲಾಶಯದಿಂದ ೨೦ ಸಾವಿರ ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಯಿತು.
ಹೇಮಾವತಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು, ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತಕ್ಷಣವೇ ತೆರಳಲು ಗೊರೂರು ಹೇಮಾವತಿ ಯೋಜನಾ ವೃತ್ತದ ಸೂಪರಿಂಟೆಂಡಿಂಗ್ ಎಂಜಿನಿಯರ್ ತಿಳಿಸಿದ್ದಾರೆ.
ಜಲಾಶಯದಿಂದ ನೀರು ಹೊರಬಿಟ್ಟಿರುವುದರಿಂದ ಜಲಾಶಯದ ತಗ್ಗು ಪ್ರದೇಶಗಳಾದ ಮರಡಿ, ಅತ್ನಿ, ಹೆಬ್ಬಾಲೆ, ಪಡುಲಿಪೆ, ಹೊಳೆನರಸೀಪುರ ಮತ್ತಿತರ ಗ್ರಾಮಗಳಿಗೆ ಮುನ್ನಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದ್ದಾರೆ.
Conclusion:ಇದಲ್ಲದೆ ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಆರ್ಭಟಕ್ಕೆ ಜಿಲ್ಲೆಯ ಸಕಲೇಶಪುರ, ಆಲೂರು, ಹಾಸನ, ಬೇಲೂರು, ಅರಕಲಗೂಡು, ಅರಕಲಗೂಡು ತಾಲ್ಲೂಕುಗಳಲ್ಲಿರುವ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಶುಕ್ರವಾರವೂ ರಜೆ ಘೋಷಿಸಿದ್ದಾರೆ.

- ಅರಕೆರೆ ಮೋಹನಕುಮಾರ,ಈಟಿವಿ ಭಾರತ, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.