ETV Bharat / state

ಅನುದಾನ ರಹಿತ ಶಾಲೆಗಳಿಗೆ ಆರ್ಥಿಕ ನೆರವು ನೀಡಿ: ಶಿಕ್ಷಣ ಸಚಿವರಿಗೆ ಮನವಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯರು ಶಿಕ್ಷಣ ಸಚಿವ ಎಸ್​​.ಸುರೇಶ್ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

author img

By

Published : May 23, 2020, 8:19 PM IST

Appeal
ಮನವಿ

ಹಾಸನ: ಖಾಸಗಿ ಶಿಕ್ಷಣ ಸಂಸ್ಥೆಗಳ ಆರ್​​ಟಿಇ ಹಣ ಮರುಪಾವತಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಆರ್ಥಿಕ ನೆರವು ಹಾಗೂ 6ನೇ ವೇತನ ಆಯೋಗದ ಅನ್ವಯ ವೇತನ ಪಾವತಿ ಪುನರ್​ ವಿಮರ್ಶೆಗೆ ಒತ್ತಾಯಿಸಿ ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​​.ಸುರೇಶ್ ಕುಮಾರ್‌ ಅವರಿಗೆ ಮನವಿ ಸಲ್ಲಿಸಿತು.

ಸಚಿವರು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಆಗಮಿಸಿದಾಗ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಕೊರೊನಾದಿಂದಾಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಾಲಾ ಸಿಬ್ಬಂದಿ​ ವೇತನವಿಲ್ಲದೇ, ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದೇವೆ. ಕಟ್ಟಡ ನಿರ್ವಹಣೆ, ವಿದ್ಯುತ್, ನೀರು ಬಿಲ್​​​ ಪಾವತಿಗೂ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.

ಕೋವಿಡ್-19ರ ಸಂಕಷ್ಟದ ಸಮಯದಲ್ಲಿ ವೇತನವನ್ನೂ ನೀಡಲಾಗದ ಪರಿಸ್ಥಿತಿ ಶಿಕ್ಷಣ ಸಂಸ್ಥೆಗಳಿಗೆ ನಿರ್ಮಾಣವಾಗಿದೆ. ಸಂಸ್ಥೆಯಲ್ಲಿ ಹಣವಿಲ್ಲ. ಸಾಲ ಸಿಗುವುದಿಲ್ಲ.​ ಆದ್ದರಿಂದ ಆರ್​​ಟಿಇ ಹಣವನ್ನು ಶೀಘ್ರ ಬಿಡುಗಡೆ ಮಾಡಿ ಎಂದು ಕೇಳಿಕೊಂಡರು.

ಅನುದಾನ ರಹಿತ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೂ ಪ್ರೋತ್ಸಾಹ ರೂಪದಲ್ಲಿ ಪರಿಹಾರ ಧನದ ಪ್ಯಾಕೇಜ್ ಘೋಷಿಸಿ ಎಂದು ತಮ್ಮ ಅಳಲು ತೋಡಿಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.